ಬೆಂಗಳೂರು : ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ಇಬ್ಬರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರೌಡಿ ಅರಸಯ್ಯನ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ ಶೂಟ್ ಗಿರಿ ಹಾಗೂ ಸ್ವರೂಪ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. 2022ರಲ್ಲಿ ಸ್ವರೂಪ್ ಎಂಬಾತನಿಗೆ ಫೇಸ್‌ಬುಕ್‌ನಲ್ಲಿ ಮಹಿಳೆ ಪರಿಚಯವಾಗಿದ್ದಳು.
ನಂತರ ಮಹಿಳೆ ಬಳಿ ಸ್ವರೂಪ್, ಕಷ್ಟ ಎಂದು ಹೇಳಿಕೊಂಡು, 4 ಲಕ್ಷ ರೂ. ಹಣ ಪಡೆದಿದ್ದ. ಮಹಿಳೆ ಹಣ ವಾಪಸ್ ಕೇಳಿದಾಗ ಆಕೆಯ ಖಾಸಗಿ ವೀಡಿಯೋ ಹಾಗೂ ಫೋಟೋ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.
ನೊಂದ ಮಹಿಳೆ ಪೊಲೀಸ್ ಠಾಣೆಗೆ ದೂರು ಕೊಡಲು ಮುಂದಾದಾಗ ಶೂಟ್ ಗಿರಿ ಹಣ ಕೊಡುವುದಾಗಿ ಮಹಿಳೆಯನ್ನು ತಡೆದಿದ್ದ. ಬಳಿಕ ಹಣ ಕೊಡದೇ, ಸ್ವರೂಪ್ ನಮ್ಮ ಹುಡುಗ ಅವನ ತಂಟೆಗೆ ಬಂದ್ರೆ ಸರಿ ಇರಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೇ ವೀಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.















