ಮನೆ ರಾಜ್ಯ ಮಕ್ಕಳ ಮೇಲೆ ದೌರ್ಜನ್ಯ ಆರೋಪ; ವಚನಾನಂದ ಶ್ರೀಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು..!

ಮಕ್ಕಳ ಮೇಲೆ ದೌರ್ಜನ್ಯ ಆರೋಪ; ವಚನಾನಂದ ಶ್ರೀಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು..!

0

ದಾವಣಗೆರೆ : ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿದ್ದ ವಚನಾನಂದ ಶ್ರೀಗೆ ವಿಶೇಷ ಜಿಲ್ಲಾ ನ್ಯಾಯಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದಾವಣಗೆರೆ ಜಿಲ್ಲೆಯ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರ ವಿರುದ್ಧ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಸ್ವಾಮೀಜಿ ಏ.21ರಂದು ವಿಶೇಷ ಜಿಲ್ಲಾ ನ್ಯಾಯಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ನ್ಯಾಯಾಲಯದ ಅನುಮತಿ ಇಲ್ಲದೇ ವ್ಯಾಪ್ತಿ ಬಿಟ್ಟು ಹೋಗಬಾರದು ಎಂದು ಷರತ್ತು ವಿಧಿಸಿದೆ.

ಹರಿಹರ ಮಠದ ಹಾಸ್ಟೆಲ್‌ನಲ್ಲಿದ್ದ ಮಕ್ಕಳ ಮೇಲೆ ಸ್ವಾಮೀಜಿ ಹಾಗೂ ಅವರ ಬೆಂಬಲಿಗರು ದೌರ್ಜನ್ಯವೆಸಗುತ್ತಿದ್ದರು ಎಂದು ಆರೋಪಿಸಿ ಮೂರು ಮಕ್ಕಳು CWC ಮುಂದೆ ದೂರು ನೀಡಿದ್ದರು.