ಮನೆ ಕಾನೂನು ಮಾಹಿತಿ ಮರೆಮಾಚಿದ ಆರೋಪ: ಬಿಜೆಪಿ ಶಾಸಕ ಉದಯ್ ಬಿ. ಗರುಡಾಚಾರ್’ಗೆ 2 ವರ್ಷ ಜೈಲು

ಮಾಹಿತಿ ಮರೆಮಾಚಿದ ಆರೋಪ: ಬಿಜೆಪಿ ಶಾಸಕ ಉದಯ್ ಬಿ. ಗರುಡಾಚಾರ್’ಗೆ 2 ವರ್ಷ ಜೈಲು

0

ಬೆಂಗಳೂರು(Bengaluru): ಚುನಾವಣಾ ಪ್ರಮಾಣ ಪತ್ರದಲ್ಲಿ ಮಾಹಿತಿ ಮರೆಮಾಚಿದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ ಬಿ. ಗರುಡಾಚಾರ್ ಅವರಿಗೆ ಎರಡು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಸಂಬಂಧ ಎಚ್‌.ಜಿ. ಪ್ರಶಾಂತ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹಾಲಿ- ಮಾಜಿ, ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮ್ಯಾಜಿಸ್ಟ್ರೇಟ್ ವಿಚಾರಣಾ ನ್ಯಾಯಾಲಯದ (ಎಸಿಎಂಎಂ-42) ನ್ಯಾಯಾಧೀಶೆ ಪ್ರೀತ್ ಜೆ ಈ ಕುರಿತಂತೆ ತೀರ್ಪು ನೀಡಿದ್ದಾರೆ.

ಪ್ರಕರಣವೇನು? : ಉದಯ್ ಗರುಡಾಚಾರ್ 2018ರಲ್ಲಿ ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಗಳಿಸಿದ್ದಾರೆ.

ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಅವರು ತಮ್ಮ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ, ಮೇವರಿಕ್ ಹೋಲ್ಡಿಂಗ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿರುವುದು ಮತ್ತು ಪತ್ನಿಯ ಬ್ಯಾಂಕ್ ಖಾತೆಯ ವಿವರಗಳನ್ನು ಪ್ರಮಾಣ ಪತ್ರದಲ್ಲಿ ಬಹಿರಂಗಪಡಿಸಿಲ್ಲ ಎಂದು ಆಕ್ಷೇಪಿಸಿ ಬನಶಂಕರಿ ಮೂರನೇ ಹಂತದ ನಿವಾಸಿ ಎಚ್.ಜಿ.ಪ್ರಶಾಂತ್ ಖಾಸಗಿ ದೂರು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ‘ಆರೋಪಿಯು ವಿವರಗಳನ್ನು ಮುಚ್ಚಿಟ್ಟಿರುವುದು ಧೃಡಪಟ್ಟಿದ್ದು, ಜನತಾ ಪ್ರಾತಿನಿಧ್ಯ ಕಾಯ್ದೆ-1956ರ ಕಲಂ 125-ಎ ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಗುರುತಿಸಲಾಗಿದೆ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ ನ್ಯಾಯಾಲಯ, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.ಅರ್ಜಿದಾರರ ಪರ ವಕೀಲ ಎಚ್.ಮಂಜುನಾಥ್ ವಾದ ಮಂಡಿಸಿದ್ದರು.