ಶ್ರೀನಗರ(Srinagar): ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದಲ್ಲದೇ, ಉಗ್ರ ಕೃತ್ಯಕ್ಕೆ ನಿಧಿ ಸಂಗ್ರಹಣ ಮಾಡುತ್ತಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ, ಪೂಂಚ್, ಜಮ್ಮು, ಶ್ರೀನಗರ, ಪುಲ್ವಾಮಾ, ಬುದ್ಗಾಮ್, ಶೋಪಿಯಾನ್ ಮತ್ತು ಬಂಡಿಪೋರಾ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿರುವ ಟ್ರಸ್ಟ್ನ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿರುವ ಅಲ್ ಹುದಾ ಎಜುಕೇಷನಲ್ ಟ್ರಸ್ಟ್ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದು, ಅದರ ಅನುಮಾನಾಸ್ಪದ ಚಟುವಟಿಕೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಯುಎಪಿಎ ಕಾಯ್ದೆಯಡಿ ಉಗ್ರ ಸಂಘಟನೆ ಎಂದು ಘೋಷಿಸಲಾದ ಜಮಾತ್-ಎ-ಇಸ್ಲಾಮಿ ಜೊತೆ ಅಲ್ ಹುದಾ ಎಜುಕೇಷನಲ್ ಟ್ರಸ್ಟ್ ಚಟುವಟಿಗಳನ್ನು ಹೊಂದಿದೆ ಎಂಬ ಆಪಾದನೆ ಮೇಲೆ ಎನ್ಐಎ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ಜೊತೆಗೂಡಿ ಎನ್ಐಎ ಕಾರ್ಯಾಚರಣೆ ನಡೆಸಿದೆ.