ಮನೆ ರಾಜ್ಯ ಮತದಾರರ ಮಾಹಿತಿ ಕದ್ದ ಆರೋಪ: ಕಾಂಗ್ರೆಸ್ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

ಮತದಾರರ ಮಾಹಿತಿ ಕದ್ದ ಆರೋಪ: ಕಾಂಗ್ರೆಸ್ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

0

ಬೆಂಗಳೂರು(Bengaluru): ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಶನಿವಾರ ದೂರು ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಶಾಸಕರಾದ ದಿನೇಶ್ ಗುಂಡೂರಾವ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಮುಖಂಡ ಎಚ್.ಎಂ. ರೇವಣ್ಣ ನಿಯೋಗದಲ್ಲಿದ್ದರು.

ಚಿಲುಮೆ ಟ್ರಸ್ಟ್ ಹೆಸರಿನಲ್ಲಿ ಮತದಾರರ ಜಾಗೃತಿ ಅಭಿಯಾನಕ್ಕೆ ಅನುಮತಿ ಪಡೆದುಕೊಂಡು ಮತದಾರರ ಮಾಹಿತಿ ಕಳವು ಮಾಡಲಾಗಿದೆ. ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೆಸರುಗಳನ್ನು ಕಿತ್ತು ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸ್ ಬಿಗಿ ಭದ್ರತೆ: ಮತದಾರರ ಮಾಹಿತಿ ಅಕ್ರಮವಾಗಿ ಸಂಗ್ರಹಿಸಿರುವುದು ಚುನಾವಣೆ ಪ್ರಕ್ರಿಯೆ ಭ್ರಷ್ಟಾಚಾರಗೊಳಿಸುವ ಹುನ್ನಾರ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ದಿಢೀರ್ ಪ್ರತಿಭಟನೆಗೆ ಕೈ ನಾಯಕರು ಮುಂದಾಗಬಹುದು ಎಂಬ ಕಾರಣಕ್ಕೆ ಪೊಲೀಸ್ ಇಲಾಖೆ ವಿಶೇಷ ಎಚ್ಚರಿಕೆ ವಹಿಸಿತ್ತು. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ರನ್ನು ಭದ್ರತೆಗೆ ನಿಯೋಜಿಸಿತ್ತು. ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿರುವ ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ನಿನ್ನೆ ಧರಣಿ ಮಾಡುವುದಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿತ್ತು.

ಹಿಂದಿನ ಲೇಖನಆರೋಪಿಯ ಮನೆ ಧ್ವಂಸ ಮಾಡುವುದು ಗ್ಯಾಂಗ್’ವಾರ್’ಗೆ ಸಮ: ಗುವಾಹಟಿ ಹೈ ಕೋರ್ಟ್‌
ಮುಂದಿನ ಲೇಖನನೀವೂ ಅಪ್ಪ- ಅಮ್ಮ ತೋರಿಸಿದವರನ್ನು ಮದುವೆಯಾಗುತ್ತಿದ್ದೀರಾ ಹಾಗಾದರೆ ಇದನ್ನು ತಿಳಿಯಿರಿ