ಮನೆ ರಾಜ್ಯ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು: ನೇಹಾ ತಂದೆ ನಿರಂಜನಯ್ಯ ಹಿರೇಮಠ

ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು: ನೇಹಾ ತಂದೆ ನಿರಂಜನಯ್ಯ ಹಿರೇಮಠ

0

ಹುಬ್ಬಳ್ಳಿ: ಬಿವಿಬಿ ಕಾಲೇಜು ಕ್ಯಾಂಪಸ್​ ನಲ್ಲಿ ನಡೆದ ನನ್ನ ಮಗಳು ನೇಹಾ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕು. ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು. ನನ್ನ ಮಗಳಿಗಾದ ಅನ್ಯಾಯ ಬೇರಾವ ಹೆಣ್ಣು ಮಗಳಿಗೂ ಆಗಬಾರದು ಎಂದು ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದರು.

Join Our Whatsapp Group

ಇಂದು ಮಗಳ ಶವವನ್ನು ಮನೆಗೆ ತಂದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರೀತಿಸುವಂತೆ ನನ್ನ ಮಗಳನ್ನು ಆರೋಪಿ ಪದೇ ಪದೇ ಪೀಡಿಸುತ್ತಿದ್ದ. ಆದರೆ ಮಗಳು ನೇರವಾಗಿ ನಿರಾಕರಿಸಿದ್ದಳು. ನಿಮ್ಮ ಜಾತಿನೇ ಬೇರೆ. ಇದಕ್ಕೆಲ್ಲ ಒಪ್ಪುವುದಿಲ್ಲ. ಪ್ರೀತಿ ಅಂತ ನನಗೆ ತೊಂದರೆ ಕೊಡಬೇಡ ಎಂದು ಹಲವು ಬಾರಿ ಆತನಿಗೆ ಎಚ್ಚರಿಕೆ ನೀಡಿದ್ದಳು.

ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ ಆತ, ನೀನು ನನ್ನ ಪ್ರೀತಿಸದಿದ್ದರೆ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಈ ಬಗ್ಗೆ ಆತನ ಪೋಷಕರೊಂದಿಗೆ ನನ್ನ ಸಹೋದರ ಸಹ ಮಾತನಾಡಿದ್ದನು. ಹೀಗಿದ್ದರೂ ಕೊನೆಗೂ ಆರೋಪಿ ಕೊಲೆ ಮಾಡಿದ್ದಾನೆ. ಆತನಿಗೆ ಗಲ್ಲು ಶಿಕ್ಷೆಯಾಗಬೇಕು. ಕೊಲೆಗಾರನ ಜೊತೆಗೆ ನಾಲ್ಕೈದು ಜನ ಅದೇ ಸಮುದಾಯದವರು ಇದ್ದರು. ಈ ಪ್ರಕರಣವನ್ಜು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ನಿನ್ನೆ ನಡೆದ ಘಟನೆ ಕುರಿತು ಈಗಾಗಲೇ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಎಲ್ಲ ಹಂತಗಳಲ್ಲೂ ತನಿಖೆ ಮುಂದುವರೆದಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.

ಬಿವಿಬಿ ಕಾಲೇಜಿನ ಕ್ಯಾಂಪಸ್​ನಲ್ಲಿ‌ ಪ್ರತಿಭಟನೆ ನಡೆಸುತ್ತಿರುವ ಎಬಿವಿಪಿ ಕಾರ್ಯಕರ್ತರನ್ನು ‌ಭೇಟಿ ಮಾಡಿದ ಬಳಿಕ‌ ಮಾತನಾಡಿದ ಅವರು, ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಶಿಕ್ಷೆಯಾಗಬೇಕೋ ಅದು ಆಗುತ್ತದೆ. ಸಮಗ್ರ ತನಿಖೆ ನಡೆಸುತ್ತಿದ್ದೇವೆ. ಸದ್ಯ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದರು.

ಹಿಂದಿನ ಲೇಖನಜನಗಳ ಪ್ರತಿನಿಧಿಯಾಗಿ ಲೊಕಸಭೆಯಲ್ಲಿ ಮಾತನಾಡದಿದ್ದರೆ ಅಲ್ಲಿಗೆ ಯಾಕೆ ಹೋಗಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಮುಂದಿನ ಲೇಖನಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲ ಮನ್ನ: ಸಿಎಂ