ಕೋಯಿಕ್ಕೋಡ್: ಪೋಕ್ಸೊ ಪ್ರಕರಣದ ಆರೋಪಿಯಾದ ಕೇರಳದ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಬೆಳಗ್ಗೆ ಕೋಯಿಕ್ಕೋಡ್ ಬಳಿಯ ಸಂತ್ರಸ್ತೆಯ ಮನೆಯ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತನ್ನ ನೆರೆ ಮನೆಯವರ ಮಗಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮಾಜಿ ಪೊಲೀಸ್ ಅಧಿಕಾರಿ ಕೆ.ಪಿ ಉನ್ನಿ ಅವರು 2021ರಲ್ಲಿ ಬಂಧನವಾಗಿದ್ದರು. ನಂತರ ಅವರು ಜಾಮೀನು ಪಡೆದು ಹೊರಬಂದಿದ್ದರು.
ಆದರೆ, ಮಂಗಳವಾರ ಸಂತ್ರಸ್ತೆಯ ಮನೆಯ ಕಾರು ಪಾರ್ಕಿಂಗ್ ಸ್ಥಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡುಬಂದಿದ್ದರೂ, ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Saval TV on YouTube