ಮನೆ ಅಪರಾಧ ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ

ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ

0

ಬೆಂಗಳೂರು(Bengaluru) : ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಕಬ್ಬನ್‌ಪೇಟೆ 10ನೇ ಕ್ರಾಸ್​ನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಗಾಯಾಳು ಮತ್ತು ಆರೋಪಿ ಒಂದೇ ಕಡೆ ಕೆಲಸ ಮಾಡುತ್ತಿದ್ದರು.

ಭಾನುವಾರ ಕ್ಷುಲ್ಲಕ ವಿಚಾರಕ್ಕೆ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಜನತಾ ಅದಕ್ ಡೈಲೂಟೇಡ್ ಸೆಲ್ಫುರಿಕ್ ಆ್ಯಸಿಡ್ ಎರಚಿ ಕ್ರೌರ್ಯ ಮೆರೆದಿದ್ದಾನೆ.

ವ್ಯಕ್ತಿಗೆ ಶೇ.30ರಷ್ಟು ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮೈಸೂರು ಬಳಿ ಓಡಾಡಿಕೊಂಡಿದ್ದ ಆರೋಪಿ ಜನತಾ ಅದಕ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನನಮ್ಮ ಪಕ್ಷದ ಅಭ್ಯರ್ಥಿಗಳು ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ : ಬಿಎಸ್‌ವೈ
ಮುಂದಿನ ಲೇಖನರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್‌ ವಜಾ