ಮನೆ ಅಪರಾಧ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಬೆಂಗಳೂರು(Bengaluru)- ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಘಟನೆ ನಡೆದ 16 ದಿನಗಳ ಬಳಿಕ ಬೆಂಗಳೂರು ಪೊಲೀಸರು ನಾಗೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌.
ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ನಾಗೇಶ್ ತಮಿಳುನಾಡಿನ ತಿರುವಣ್ಣಾಮಲೈ ಮಠವೊಂದರಲ್ಲಿ ಸ್ವಾಮೀಜಿಯಂತೆ ವೇಷ ಮರೆಸಿಕೊಂಡಿದ್ದ. ವಿಷಯ ತಿಳಿದ ಪೊಲೀಸರು ಭಕ್ತರ ವೇಷದಲ್ಲಿ ಆಶ್ರಮಕ್ಕೆ ಹೋಗಿ ಆತನನ್ನು ಒದ್ದು ಬೆಂಗಳೂರಿಗೆ ಕರೆ ತಂದಿದ್ದಾರೆ.
ಏಪ್ರಿಲ್ 28 ರಂದು ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿ ತಲೆಮರೆಸಿಕೊಂಡಿದ್ದ. ಸದ್ಯ ಸಂತ್ರಸ್ತ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಹಿಂದಿನ ಲೇಖನಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ :  ಡಾ. ಟಿ. ಎನ್ ಧನಂಜಯ
ಮುಂದಿನ ಲೇಖನರಾಜ್ಯದಲ್ಲಿ 156 ಮಂದಿಗೆ ಕೊರೊನಾ ಸೋಂಕು