ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಎನ್‌ಎಎಲ್‌ಎಸ್‌ಎ) ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನು ಕಾರ್ಯಕಾರಿ ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ.
ನ್ಯಾ. ಚಂದ್ರಚೂಡ್ ಅವರ ನೇಮಕಾತಿಯನ್ನು ಕಾನೂನು ಮತ್ತು ನ್ಯಾಯದಾನ ಇಲಾಖೆಯು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದೆ. ಈ ಹುದ್ದೆಯನ್ನು ಹಿಂದೆ ಹಾಲಿ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ನಿಭಾಯಿಸಿದ್ದರು.
ಅಲಾಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಡಿ ವೈ ಚಂದ್ರಚೂಡ್ ಅವರು ಕೆಲಸ ಮಾಡಿದ್ದಾರೆ. ಸಿಜೆಐ ಲಲಿತ್ ಅವರ ನಿವೃತ್ತಿ ಬಳಿಕ ನ್ಯಾಯಮೂರ್ತಿ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್‌ನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.