ಮನೆ ಅಪರಾಧ ಪೇಸಿಎಂ ಪೋಸ್ಟರ್ ಅಂಟಿಸಿರುವವರ ವಿರುದ್ಧ ಕ್ರಮ: ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಪೇಸಿಎಂ ಪೋಸ್ಟರ್ ಅಂಟಿಸಿರುವವರ ವಿರುದ್ಧ ಕ್ರಮ: ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

0

ಬೆಂಗಳೂರು(Bengaluru): ಮೇಲೆ ‘ಪೇ-ಸಿಎಂ’ ಎಂದು ಕ್ಯೂಆರ್ ಕೋಡ್ ಇರುವ ಭಿತ್ತಿಪತ್ರ ಅಂಟಿಸಿರುವವರ ವಿರುದ್ಧ ವಿರುದ್ಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಪ್ರತಿಪಕ್ಷಗಳು ಆರೋಪಿಸುತ್ತಲೇ ಬಂದಿವೆ. ಈ ನಿಟ್ಟಿನಲ್ಲಿ ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಕಾಂಗ್ರೆಸ್ ನಗರದ ಗೋಡೆಗಳ ಮೇಲೆ ‘ಪೇ-ಸಿಎಂ’ ಎಂದು ಕ್ಯೂಆರ್ ಕೋಡ್ ಇರುವ ಪೋಸ್ಟರ್ ಅಂಟಿಸಿದೆ.

ಈ ಕ್ಯೂಆರ್ ಕೋಡ್’ನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ಅದು ಬಳಕೆದಾರರನ್ನು ದೂರುಗಳಿಗಾಗಿ ಇತ್ತೀಚೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ ‘40% ಕಮಿಷನ್ ಸರ್ಕಾರ’ ವೆಬ್’ಸೈಟ್’ಗೆ ಕರೆದೊಯ್ಯುತ್ತದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಈ ಪೋಸ್ಟರ್’ಗಳನ್ನು ವಿನ್ಯಾಸಗೊಳಿಸಲಾಗಿದೆ.

ಹಿಂದಿನ ಲೇಖನಅಕ್ರಮ ಆಸ್ತಿ ಗಳಿಕೆ: ನಿವೃತ್ತ ಆರ್’ಟಿಓ ಅಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ
ಮುಂದಿನ ಲೇಖನಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ ಅಮಾನತು