ಮನೆ ರಾಜ್ಯ ಇಂಧನ ಇಲಾಖೆ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಕ್ರಮ: ಸುನಿಲ್  ಕುಮಾರ್

ಇಂಧನ ಇಲಾಖೆ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಕ್ರಮ: ಸುನಿಲ್  ಕುಮಾರ್

0

ಬೆಂಗಳೂರು (Bengaluru): ಇಂಧನ ಇಲಾಖೆಯ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.

ಕರ್ನಾಟಕ ಇವಿ ಜಾಗೃತಿ ಪೋರ್ಟಲ್ ಮತ್ತು ಬೆಂಗಳೂರು ನಗರವನ್ನು ಜಾಗತಿಕ ಇವಿ ವಲಯವನ್ನಾಗಿ ಪರಿವರ್ತಿಸುವ ದಿಕ್ಸೂಚಿ ವರದಿ ಬಿಡುಗಡೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂಧನ ಇಲಾಖೆ ಅಧೀನದಲ್ಲಿ ಬರುವ ಎಲ್ಲ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಮೂರು ತಿಂಗಳ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು.

ವಿದ್ಯುತ್ ಚಾಲಿತ ವಾಹನಗಳ  ಬೆಲೆ, ಪೆಟ್ರೋಲ್ ಹಾಗೂ ಡೀಸೆಲ್‌ ವಾಹನಗಳ ಬೆಲೆಗಿಂತ ದುಬಾರಿ ಇರುವುದರಿಂದ, ಇಲೆಕ್ಟ್ರಿಕ್ ವಾಹನ ಬಳಕೆಗೆ ಇನ್ನೂ ಒಪ್ಪಿಗೆ ದೊರೆತಿಲ್ಲ. ಇಲೆಕ್ಟ್ರಿಕ್ ವಾಹನ ಬಳಸುವುದು ನಮ್ಮ ಇಲಾಖೆಯ ಆದ್ಯತೆ ಆಗಿದ್ದು, ಹಣಕಾಸು ಇಲಾಖೆ ಸಮ್ಮತಿಸಿದರೆ ಮುಂದಿನ ದಿನಗಳಲ್ಲಿ ಇಂಧನ ಇಲಾಖೆಯ ಎಲ್ಲ ಕಚೇರಿಗಳಲ್ಲಿ ಇಲೆಕ್ಟ್ರಿಕ್ ವಾಹನಗಳನ್ನು ಬಳಸಲಾಗುವುದು ಎಂದು ತಿಳಿಸಿದರು.

ಹಿಂದಿನ ಲೇಖನಅಕ್ರಮ ಹಣ ವರ್ಗಾವಣೆ: ಜೂ.13 ರವರೆಗೆ ಸಚಿವ ಸತ್ಯೇಂದ್ರ ಜೈನ್ ಇಡಿ ವಶಕ್ಕೆ
ಮುಂದಿನ ಲೇಖನಜೂ.23 ರಿಂದ ಇವಿ ಚಾರ್ಜಿಂಗ್ ಸೆಂಟರ್ ಗಳ ಕುರಿತು ಅಭಿಯಾನ: ಸಚಿವ ವಿ.ಸುನಿಲ್‌  ಕುಮಾರ್‌