ಮೈಸೂರು(Mysuru): ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಮಾರಾಟ ತಡೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಯಲ್ಲೂ ನಕಲಿ ಮದ್ಯ ಮಾರಾಟ ಮತ್ತು ತಯಾರಿಕೆ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಹೊಸ ಮದ್ಯದ ಅಂಗಡಿಗಳ ಆರಂಭಕ್ಕೆ ಪರವಾನಗಿ ನೀಡುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಹಾಗೇನಾದರೂ ಇದ್ದರೆ ಮುಖ್ಯಮಂತ್ರಿ ಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.