ಮನೆ ಉದ್ಯೋಗ ರಾಜ್ಯ ಪೊಲೀಸ್ ಇಲಾಖೆಯ 5 ಸಾವಿರ ಕಾನ್ಸ್’ಟೇಬಲ್ ಹುದ್ದೆ ಭರ್ತಿಗೆ ಕ್ರಮ: ಆರಗ ಜ್ಞಾನೇಂದ್ರ

ರಾಜ್ಯ ಪೊಲೀಸ್ ಇಲಾಖೆಯ 5 ಸಾವಿರ ಕಾನ್ಸ್’ಟೇಬಲ್ ಹುದ್ದೆ ಭರ್ತಿಗೆ ಕ್ರಮ: ಆರಗ ಜ್ಞಾನೇಂದ್ರ

0

ಬೆಂಗಳೂರು(Bengaluru): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು 5 ಸಾವಿರ ಕಾನ್ಸ್’ಟೇಬಲ್  ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನ ಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶಾಂತಿ ಸೌಹಾರ್ದ ಕಾಪಾಡುವ ಹೊಣೆ ಹೊತ್ತಿರುವ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ಮೇಲೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಮೂರು ವರ್ಷಗಳ ಹಿಂದೆ ಇಲಾಖೆಯಲ್ಲಿ ಒಟ್ಟು 22ಸಾವಿರ ಹುದ್ದೆಗಳು ಖಾಲಿಯಿದ್ದು, ನೇಮಕಾತಿ ನಂತರ ಖಾಲಿ ಹುದ್ದೆಗಳ ಸಂಖ್ಯೆ ಪ್ರಸ್ತುತ 9 ಸಾವಿರ ಇದೆ. ಈ ವರ್ಷ ಸುಮಾರು 3500 ಸಶಸ್ತ್ರ ಪೊಲೀಸರ ಹುದ್ದೆಗಳ ಭರ್ತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಹಾಗೂ ಇನ್ನೂ 1500 ನಾಗರಿಕ ಪೊಲೀಸ್ ಕಾನ್ಸ್’ಟೇಬಲ್ ಹುದ್ದೆ ಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡುವುದರ ಜತೆಗೆ ಠಾಣೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಸಹ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು  ಹೇಳಿದರು.

ಜೆಡಿಎಸ್ ಶಾಸಕ ಕುಮಾರಸ್ವಾಮಿ ಅವರೂ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದರು.