ಮನೆ ರಾಜಕೀಯ ರಾಯಚೂರು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ‌ ಮದ್ಯ ಮಾರಾಟ ತಡೆಗೆ ಕ್ರಮ: ಕೆ.ಗೋಪಾಲಯ್ಯ

ರಾಯಚೂರು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ‌ ಮದ್ಯ ಮಾರಾಟ ತಡೆಗೆ ಕ್ರಮ: ಕೆ.ಗೋಪಾಲಯ್ಯ

0

ಬೆಂಗಳೂರು(Bengaluru): ರಾಯಚೂರು ತಾಲ್ಲೂಕಿನ ಗ್ರಾಮೀಣ ‌ಪ್ರದೇಶಗಳಲ್ಲಿ ಅನಧಿಕೃತ ಮದ್ಯ ಸರಬರಾಜು ಮತ್ತು ಮಾರಾಟ  ತಡೆ ಸಂಬಂಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿಧಾನಸಭೆಗಿಂದು ತಿಳಿಸಿದರು.

ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಅನಧಿಕೃತ ಮದ್ಯ ಸರಬರಾಜು ಮತ್ತು ಮಾರಾಟ ತಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಕ್ರಮ‌ ಮದ್ಯ ಮಾರಾಟಗಾರರ ವಿರುದ್ಧ ಕಠಿಣ ಕ್ರಮಕ್ಕೂ ನಿರ್ದೇಶನ  ನೀಡಲಾಗಿದೆ ಎಂದರು.

ಇದೀಗ ಶಾಸಕರ ಆಗ್ರಹದ ಮೇರೆಗೆ  ಮತ್ತೊಮ್ಮೆ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಅನಧಿಕೃತ ಮದ್ಯ ಮಾರಾಟ ತಡೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದರು.

ಹಿಂದಿನ ಲೇಖನವರದಕ್ಷಿಣೆ ಕಿರುಕುಳ: ಬೆಂಕಿ ಹಚ್ಚಿದ ಗಂಡನನ್ನೇ ಅಪ್ಪಿಕೊಂಡ ಪತ್ನಿ
ಮುಂದಿನ ಲೇಖನಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ: ಸುಪ್ರೀಂ ತೀರ್ಪಿಗೆ ವಿರುದ್ಧವಾದ ಆದೇಶಗಳಿದ್ದರೆ ಸಲ್ಲಿಸಲು ಸೂಚಿಸಿದ ಹೈಕೋರ್ಟ್