ಮನೆ ರಾಜಕೀಯ ಯಾರೇ ತಪ್ಪು ಮಾಡಿದರೂ ಕಾನೂನಿನಡಿ ಕ್ರಮ ಆಗಲಿದೆ: ಗೃಹ ಸಚಿವ ಡಾ ಜಿ ಪಮೇಶ್ವರ್

ಯಾರೇ ತಪ್ಪು ಮಾಡಿದರೂ ಕಾನೂನಿನಡಿ ಕ್ರಮ ಆಗಲಿದೆ: ಗೃಹ ಸಚಿವ ಡಾ ಜಿ ಪಮೇಶ್ವರ್

0

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ್​ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಈ ಬಗ್ಗೆ ಗೃಹ ಸಚಿವ ಡಾ ಜಿ ಪಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದು ಹೇಳಿದರು.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದ್ದು, ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಪೊಲೀಸರು ಸುಮೊಟೋ ಕೇಸ್​ ದಾಖಲಿಸಿಲ್ಲ. ದೂರಿನ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನವಾಗಿದೆ. ಈ ಕೇಸ್ ​​ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದರು.