ಮನೆ ಮನರಂಜನೆ ಪೊಲೀಸರೆಂದು ಹೇಳಿಕೊಂಡು ಬಂದವರಿಂದ ಚೇತನ್ ಅಪಹರಣ: ಪತ್ನಿ ಮೇಘಾ ಆರೋಪ

ಪೊಲೀಸರೆಂದು ಹೇಳಿಕೊಂಡು ಬಂದವರಿಂದ ಚೇತನ್ ಅಪಹರಣ: ಪತ್ನಿ ಮೇಘಾ ಆರೋಪ

0

ಬೆಂಗಳೂರು: ‘ಪೊಲೀಸರೆಂದು ಹೇಳಿಕೊಂಡು ಮನೆಗೆ ಬಂದಿದ್ದ ಕೆಲವರು, ಚೇತನ್ ಅವರನ್ನು ಕರೆದೊಯ್ದಿದ್ದಾರೆ. ಅವರು ಈಗ ಎಲ್ಲಿದ್ದಾರೆಂಬುದನ್ನು ಯಾರೂ ಹೇಳುತ್ತಿಲ್ಲ. ಇದೊಂದು ಅಹರಣ’ ಎಂದು ಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಪತ್ನಿ ಮೇಘಾ ಆರೋಪಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣವೊಂದರಲ್ಲಿ ಚೇತನ್‌ ಅವರನ್ನು ಪೊಲೀಸರು ಮಧ್ಯಾಹ್ನ 3 ಗಂಟೆಗೆ ಚೇತನ್‌ ಅವರನ್ನು ಮನೆಯಿಂದ ವಶಕ್ಕೆ ಪಡೆಯಲಾಗಿದೆ. ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

‘ಪತಿ ಎಲ್ಲಿದ್ದಾರೆ’ ಎಂಬುದನ್ನು ತಿಳಿಯಲು ಪತ್ನಿ ಮೇಘಾ, ಶೇಷಾದ್ರಿಪುರ ಠಾಣೆಗೆ ಬಂದಿದ್ದಾರೆ. ಆದರೆ, ಚೇತನ್ ಶೇಷಾದ್ರಿಪುರ ಠಾಣೆಯಲ್ಲಿಲ್ಲ ಎಂಬ ಮಾಹಿತಿ ಮೇಘಾ ಅವರಿಗೆ ಗೊತ್ತಾಗಿದೆ. ಹೀಗಾಗಿ ಚೇತನ್ ಅವರ ಅಧಿಕೃತ ಫೇಸ್‌ಬುಕ್‌ ಖಾತೆ ಮೂಲಕವೇ ಲೈವ್‌ ಬಂದಿರುವ ಮೇಘಾ, ‘ಪೊಲೀಸರೆಂದು ಹೇಳಿಕೊಂಡು ಮನೆಗೆ ಬಂದಿದ್ದ ಕೆಲವರು, ಚೇತನ್ ಅವರನ್ನು ಕರೆದೊಯ್ದಿದ್ದಾರೆ. ಅವರು ಈಗ ಎಲ್ಲಿದ್ದಾರೆಂಬುದನ್ನು ಯಾರೂ ಹೇಳುತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ.

‘ಚೇತನ್ ಹಾಗೂ ಅವರ ಅಂಗರಕ್ಷಕನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇದೊಂದು ಷಡ್ಯಂತ್ರದಂತೆ ಕಾಣುತ್ತಿದೆ’ ಎಂದೂ ಅವರು ದೂರಿದ್ದಾರೆ.‘ಅಪರಾಧ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನೋಟಿಸ್ ಸಹ ಕೊಟ್ಟಿಲ್ಲ. ಇದೊಂದು ಅಕ್ರಮ ಬಂಧನವಾಗಿದೆ. ಇದರ ವಿರುದ್ಧ ಹೋರಾಡಲು ಜನರು ಬೆಂಬಲ ನೀಡಬೇಕು’ ಎಂದೂ ಕೋರಿದ್ದಾರೆ.

ಪ್ರಚೋದನಾಕಾರಿ ಟ್ವಿಟ್ಎಂದು ಬಂಧನ
ಫೆಬ್ರವರಿ 16ನೇ ತಾರೀಖು ಇದೇ ನ್ಯಾಯಮೂರ್ತಿಗಳ ಹಿಜಾಬ್ ವಿಚಾರಣೆ ಪೀಠದಲ್ಲಿ ಇದ್ದಾಗ ರೀ ಟ್ವೀಟ್ ಮಾಡಿ ನ್ಯಾಯಾಧೀಶರು ಸ್ತ್ರೀ ವಿರೋಧಿ ಎಂದು ಟ್ವೀಟ್ ನಲ್ಲಿ ಹೇಳಿದ್ರು ಹಿಜಾಬ್ ವಿಚಾರಣೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಬಾರದು,  ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಪೋಸ್ಟ್​ ಮಾಡಬಾರದು ಎಂದು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ಫೆಬ್ರವರಿ 12 ರಂದು ಕಮಲ್ ಪಂತ್ ಮೌಖಿಕ ಸೂಚನೆ ನೀಡಿದ್ರು ಆದರೆ 16 ನೇ ತಾರೀಖು ಚೇತನ್ ಟ್ವೀಟ್ ಮಾಡಿದ್ರು ಈ ಹಿನ್ನೆಲೆ ಚೇತನ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.