ಮನೆ ಕಾನೂನು ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ

ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ

0

ಬೆಂಗಳೂರು:  ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.

Join Our Whatsapp Group

ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ ಆಗಮಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ​​ ನಟ ದರ್ಶನ್​ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್​ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಱಡಿಸನ್​ ಹೋಟೆಲ್​ನಲ್ಲಿ ದರ್ಶನ್​ ಅರೆಸ್ಟ್ ಮಾಡಲಾಗಿದ್ದು ನಟ ದರ್ಶನ್ ಸೇರಿದಂತೆ ಪಟ್ಟಣಗೆರೆ ಜಯಣ್ಣ ಪುತ್ರ ವಿನಯ್​, ಕಿರಣ್, ಮಧು, ಲಕ್ಷ್ಮಣ್​, ಆನಂದ್​​, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಡಿಸಿಪಿ ಗಿರೀಶ್, ಎಸಿಪಿ ಚಂದನ್​ರಿಂದ ನಟ ದರ್ಶನ್​ ವಿಚಾರಣೆ ನಡೆಯುತ್ತಿದೆ. ಅನ್ನಪೂರ್ಣೇಶ್ವರಿನಗರ ಠಾಣೆ ಬಳಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ

ಇನ್ನು ಅಚ್ಚರಿ ಎಂದರೆ ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಎಂಬ ಮಾಹಿತಿ ಸಿಕ್ಕಿದೆ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾಳೆಂದು ತಿಳಿದು ಮೆಸೇಜ್ ಮಾಡಿದ್ದ. ಪವಿತ್ರಾಗೌಡಗೆ ಮೆಸೇಜ್ ಮಾಡುತ್ತಿರುವುದನ್ನು ತಿಳಿದ ಬಳಿಕ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಹಿಂದಿನ ಲೇಖನCBSC ನಿರಾಕ್ಷೇಪಣಾ ಪತ್ರಕ್ಕೆ ಲೆಕ್ಕ ಪರಿಶೋಧನಾ ಪತ್ರ ಕಡ್ಡಾಯ ಮಾಡದಂತೆ ಕೋರಿ ಅರ್ಜಿ: ಮನವಿ ಪರಿಗಣಿಸಲು ಹೈಕೋರ್ಟ್ ಸೂಚನೆ
ಮುಂದಿನ ಲೇಖನಕೇಂದ್ರ ಸಂಪುಟದಲ್ಲಿ ರಾಜ್ಯದ ಐವರಿಗೆ ಅವಕಾಶ: ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದ ಡಾ. ಜಿ.ಪರಮೇಶ್ವರ್‌