ಮನೆ ಮನರಂಜನೆ ನಟ ಡಾಲಿ ಧನ್ಯತಾ ದಂಪತಿಗೆ, ಗಂಡು ಮಗುವಿಗೆ ಜನನ

ನಟ ಡಾಲಿ ಧನ್ಯತಾ ದಂಪತಿಗೆ, ಗಂಡು ಮಗುವಿಗೆ ಜನನ

0

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೂ, ಮುನ್ನ ಸೋಷಿಯಲ್‌ ಮೀಡಿಯಾದಲ್ಲಿ ಒಂದು ಫೋಟೋ ವೈರಲ್‌ ಆಗಿತ್ತು. ಆ ಫೋಟೋದಲ್ಲಿ ಧನ್ಯತಾ ಗರ್ಭವತಿಯಾಗಿರುವುದು ಕಂಡುಬಂದಿತ್ತು. ಆದರೆ ದಂಪತಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ಬೇಬಿ ಬಂಪ್‌ ಫೋಟೋಶೂಟ್‌ ಮಾಡಿದ್ದು, ಸುಂದರವಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2025ರ ಫೆ.16ರಂದು ಡಾಲಿ ಧನಂಜಯ್‌ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.