ಮನೆ ಮನರಂಜನೆ ನಟ ದುನಿಯಾ ವಿಜಯ್ ಗೆ ಹುಟ್ಟುಹಬ್ಬದ ಸಂಭ್ರಮ

ನಟ ದುನಿಯಾ ವಿಜಯ್ ಗೆ ಹುಟ್ಟುಹಬ್ಬದ ಸಂಭ್ರಮ

0

ಬೆಂಗಳೂರು: ಕನ್ನಡ ಚಿತ್ರರಂಗದ ‘ಸಲಗ’ ದುನಿಯಾ ವಿಜಯ್‌ ಇಂದು 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಕನ್ನಡ ಹಾಗೂ ತೆಲುಗು ಚಿತ್ರರಂಗದ ಗಣ್ಯರು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.

ವಿಜಯ್ ನಟಿಸುತ್ತಿರುವ ಮೊದಲ ತೆಲುಗು ಸಿನಿಮಾದ ನಿರ್ದೇಶಕ ಗೋಪಿಚಂದ್ ಮಲಿನೇನಿ ಟ್ವೀಟ್‌ ಮೂಲಕ ಹುಟ್ಟುಹಬ್ಬದ ಶುಭಾಶಯ ಹೇಳಿದ್ದಾರೆ.

ಕಳೆದ ವರ್ಷ ತೆರೆಕಂಡಿದ್ದ ‘ಸಲಗ’ ಸಿನಿಮಾ ದುನಿಯಾ ವಿಜಯ್ ವೃತ್ತಿ ಬದುಕಿಗೆ ಹೊಸ ತಿರುವು ನೀಡಿತ್ತು. ಮೊದಲ ನಿರ್ದೇಶನದಲ್ಲೇ ಅವರು ಯಶಸ್ವಿಯಾಗಿದ್ದರು, ಆ ಮೂಲಕ ಚಂದನವನ ಹಾಗೂ ಟಾಲಿವುಡ್‌ ಗಮನ ಸೆಳೆದಿದ್ದರು. ದೇಶದಲ್ಲಿ ಕೋವಿಡ್‌ ಹೆಚ್ಚಳವಾಗಿರುವುದು, ಪುನೀತ್‌ ರಾಜ್‌ಕುಮಾರ್‌ ಹಾಗೂ ನನ್ನ ತಂದೆ, ತಾಯಿ ನಿಧನರಾಗಿರುವ ಹಿನ್ನೆಲೆಯಲ್ಲಿ ಈ ವರ್ಷ ಜನ್ಮದಿನ ಆಚರಿಸಿಕೊಳ್ಳಲಾರೆ ಎಂದು ವಿಜಯ್‌ ಅಭಿಮಾನಿಗಳಿಗೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ಅಭಿಮಾನಿಗಳು ಸಹ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಹಿಂದಿನ ಲೇಖನಚೀನಾದ ಪ್ರದೇಶದಲ್ಲಿ ನಾಪತ್ತೆಯಾಗಿರುವ ಯುವಕರ ಪತ್ತೆಗೆ ಪಿಎಲ್ಎ ನೆರವು ಕೋರಿದ ಭಾರತೀಯ ಸೇನೆ
ಮುಂದಿನ ಲೇಖನರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ