Saval TV on YouTube
ಚೆನ್ನೈ: ಬಹುಭಾಷಾ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ಅನಾರೋಗ್ಯ ನಿಮಿತ್ತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುಧವಾರ ಸಂಜೆ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ರಾಮಚಂದ್ರ ಮೆಡಿಕಲ್ ಕಾಲೇಜಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದ್ದು, ಈ ವೇಳೆ ಜ್ವರ ಇರುವುದು ಗೊತ್ತಾಗಿದೆ. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಇಂಡಿಯನ್-2 ‘ ಸಿನಿಮಾದಲ್ಲಿ ಕಮಲ್ ಹಾಸನ್ ನಟಿಸುತ್ತಿದ್ದಾರೆ. ಜೊತೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ನಿರತರಾಗಿದ್ದಾರೆ.














