ಮನೆ ಮನರಂಜನೆ ನಟ ರಾಕೇಶ್ ಪೂಜಾರಿ ಅಕಾಲಿಕ ನಿಧನ : ರಿಷಬ್ ಶೆಟ್ಟಿ ಸಂತಾಪ

ನಟ ರಾಕೇಶ್ ಪೂಜಾರಿ ಅಕಾಲಿಕ ನಿಧನ : ರಿಷಬ್ ಶೆಟ್ಟಿ ಸಂತಾಪ

0

ರಾಕೇಶ್ ಪೂಜಾರಿ ಅವರು ನಿಧನ ಹೊಂದಿ ಒಂದು ದಿನ ಕಳೆದಿದೆ. ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಸಂಪೂರ್ಣವಾಗಿ ಕೊನೆಗೊಂಡಿದೆಯೋ ಅತವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಿರುವಾಗಲೇ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ರಾಕೇಶ್ ಸಾವಿನ ಬಗ್ಗೆ ಮೌನ ಮುರಿದಿದ್ದಾರೆ. ಅವರು ಹೇಳಿದ್ದು ಏನು ಎಂಬ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ’ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೈಗೆತ್ತಿಕೊಂಡರು. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಎಂದಿದ್ದಾರೆ ಅವರು. ಈ ಚಿತ್ರವನ್ನು ಪ್ರೇಕ್ಷಕರ ಎದುರು ತರಲು ತಂಡ ಶ್ರಮವಹಿಸುತ್ತಿದೆ. ಈ ಚಿತ್ರಕ್ಕೆ ಹಲವು ಅಡಚಣೆಗಳು ಎದುರಾದರೂ ಅದನ್ನು ಮೆಟ್ಟಿ ನಿಲ್ಲುವ ಕೆಲಸವನ್ನು ತಂಡ ಮಾಡುತ್ತಿದೆ. ಈಗ ಚಿತ್ರದಲ್ಲಿ ನಟಿಸಿದ್ದ ರಾಕೇಶ್ ಅವರು ಕೊನೆಯುಸಿರು ಎಳೆದಿದ್ದಾರೆ. ಈ ಬಗ್ಗೆ ರಿಷಬ್ ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

‘ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗು ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಅತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ’ ಎಂದು ರಿಷಬ್ ಶೆಟ್ಟಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ತರಲು ಸಿದ್ಧತೆ ಮಾಡಿಕೊಂಡಿದೆ. ಈ ವರ್ಷ ಅಕ್ಟೋಬರ್ 2ರಂದು ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.