ಮನೆ ಮನರಂಜನೆ “ನಾ ನಿನ್ನ ಬಿಡಲಾರೆ” ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಶರಣ್

“ನಾ ನಿನ್ನ ಬಿಡಲಾರೆ” ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಶರಣ್

0

ಬೆಳ್ಳಿ ಪರದೆಗೆ ಮತ್ತೊಂದು ಹೊಸ ತಂಡ ಒಂದು ವಿಭಿನ್ನ ಪ್ರಯತ್ನದ ಚಿತ್ರದ ಮೂಲಕ ಚಿತ್ರ ಪ್ರೇಮಿಗಳನ್ನು ಸೆಳೆಯಲು ಮುಂದಾಗಿದೆ.

Join Our Whatsapp Group

ಗುಲ್ಬರ್ಗ ಮೂಲದ ಯುವ ಪ್ರತಿಭೆ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುವ ಮೂಲಕ ಅವರ ತಾಯಿ ಶ್ರೀಮತಿ ಭಾರತಿ ಬಾಳಿ ನಿರ್ಮಾಣದಲ್ಲಿ ಮೂಡಿ ಬರುತ್ತಿರುವಂತಹ ಚಿತ್ರ “ನಾ ನಿನ್ನ ಬಿಡಲಾರೆ”. ಇತ್ತೀಚೆಗೆ ಈ ಚಿತ್ರದ ಟೀಸರ್ ಅನ್ನು ನಟ ಶರಣ್  ಬಿಡುಗಡೆ ಮಾಡಿ ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶರಣ್ ಈ ಚಿತ್ರದ ನಟಿ , ನಿರ್ಮಾಪಕಿ ಭಾರತಿ ರವರ ಶ್ರಮಕ್ಕೆ ತಕ್ಕ ಚಿತ್ರ ಇದಾಗಿದೆ. ಬಹಳ ಸೌಮ್ಯ  ಸ್ವಭಾವವಿದ್ದರೂ ಆಸಕ್ತಿ , ಗುರಿ, ಶ್ರಮ ಎಲ್ಲಿರುತ್ತೋ ಅಲ್ಲಿ ಗೆಲುವು ಖಂಡಿತ. ಫೈಟ್ ಮಾಸ್ಟರ್ ಹೇಳಿದಂತೆ ಫೈಯರ್ ಫೈಟ್ ಆಕ್ಷನ್ ಸನ್ನಿವೇಶವನ್ನ ನಿಭಾಯಿಸಿದ ರೀತಿ ಅಪ್ಪು ಸರ್ ಅವರನ್ನ ನೆನಪಿಸುತ್ತದೆ ಎಂದರು. ಒಬ್ಬ ಹೆಣ್ಣು ಮಗಳು ಇಷ್ಟು ಶ್ರಮಪಟ್ಟು ಸಿನಿಮಾ ಮಾಡಿದ್ದಾರೆ ಎಂದರೆ ಇವರು ಪ್ರಥಮ ಪ್ರಯತ್ನದಲ್ಲಿ ಗೆದ್ದಂತಾಗಿದೆ. ಅದೇ ರೀತಿ ನಿರ್ದೇಶಕರು ಮೊದಲ ಪ್ರಯತ್ನವಾಗಿ ಒಳ್ಳೆಯ ಸಿನಿಮಾ ಮಾಡಿದ್ದಾರೆ ಎನಿಸುತ್ತಿದೆ.

ನನ್ನ ಫೇವರೇಟ್ ಜಾನರ್ ಹಾರರ್.  ನಾನು ನಾಲ್ಕೈದು ವರ್ಷದವ ಇದ್ದಾಗ ಅನಂತ್ ನಾಗ್, ಲಕ್ಷ್ಮೀ ಅವರ ‘ನಾ ನಿನ್ನ ಬಿಡಲಾರೆ’ ಸಿನಿಮಾ ರೀ-ರಿಲೀಸ್ ಆಗಿತ್ತು. ಆಗ ನಮ್ಮ ತಂದೆ ಆ ಚಿತ್ರ ತೋರಿಸಿದ್ದರು. ನಾನು ಎಲ್ಲಾ ಭಾಷೆಯ ದೆವ್ವಗಳ ಸಿನಿಮಾಗಳನ್ನು ತಪ್ಪದೆ ನೋಡುತ್ತೇನೆ. ಕಳೆದ ವರ್ಷ ಫೆಬ್ರವರಿಯಿಂದ ಈ ತಂಡ ನನ್ನ ಪಾಲೋ ಮಾಡತಾ ಬಂದಿದೆ. ಇವರ ಪ್ರಯತ್ನ ನನ್ನನ್ನು ಈ ವೇದಿಕೆಗೆ ಬರುವಂತೆ ಮಾಡಿದೆ. ಮೊದಲ ಪ್ರಯತ್ನದಲ್ಲೇ ಚಾಲೆಂಜ್ ಆಗಿ ಚಿತ್ರ ಮಾಡಿದ್ದಾರೆ. ಒಳ್ಳೆಯ ಸಿನಿಮಾಗಳನ್ನು ನಮ್ಮ ಕನ್ನಡಿಗರು ಕೈ ಬಿಟ್ಟಿಲ್ಲ. ಟೀಸರ್ ತುಂಬಾ ಖುಷಿ ಕೊಟ್ಟಿದೆ. ಇಡೀ ಚಿತ್ರತಂಡಕ್ಕೆ ಯಶಸ್ಸು ಸಿಗಲಿ ಎಂದು ಶುಭ ಕೋರಿದರು.

  ಅನಂತನಾಗ್ ಸರ್ ನಮ್ಮ ಚಿತ್ರದಲ್ಲಿ ಅಭಿನಯಿಸಬೇಕೆಂಬ ಆಸೆ ಇತ್ತು , ಅದಕ್ಕಾಗಿ ಪ್ರಯತ್ನ ಪಟ್ಟವು , ಆದರೆ ಡೇಟ್ಸ್ ಸಿಗಲಿಲ್ಲ.  ಈ ಒಂದು ಚಿತ್ರ  ಒಳ್ಳೆಯ ಕ್ವಾಲಿಟಿಯಲ್ಲಿ ಮಾಡಿದ್ದು , ಸೈಕಲಾಜಿಕಲ್ , ಹಾರರ್ , ಥ್ರಿಲಿಂಗ್ , ಸಸ್ಪೆನ್ಸ್  ಹಾಗೂ ಮೆಡಿಕಲ್ ಬಗ್ಗೆಯೂ ಕೂಡ ನಮ್ಮ ಚಿತ್ರದಲ್ಲಿದೆ. ಸದ್ಯ ಚಿತ್ರ ಸೆನ್ಸಾರ್ ಕಾರ್ಯ ಮುಗಿಸಿ ರಿಲೀಸ್ ಗೆ ಸಿದ್ಧವಿದೆ  ನಿಮ್ಮೆಲ್ಲರ ಪ್ರೋತ್ಸಾಹ ಸಹಕಾರ ಇರಲಿ ಎಂದು ಕೇಳಿಕೊಂಡರು.

ಇನ್ನು ಚಿತ್ರದ ನಾಯಕಿ ಅಂಬಾಲಿ ಭಾರತಿ ಮಾತನಾಡುತ್ತಾ ನಾನು ಮ‌ೂಲತಃ ಗುಲ್ಬರ್ಗ ಹುಡುಗಿ. ನನಗೂ ರಂಗಭೂಮಿ ನಂಟು ಇದೆ. ಒಂದಿಷ್ಟು ಸಿನಿಮಾಗಳಲ್ಲಿ ಚಿಕ್ಕಪುಟ್ಟ ಪಾತ್ರ ಮಾಡಿದ್ದೇನೆ.

 ಚಿತ್ರದ ನಾಯಕ ಪಂಚ್ಚಿ ( ಪಂಚೇಂದ್ರಿಯ) ಮಾತನಾಡುತ್ತಾ  ನಾನು ಮೂಲತಃ ಥಿಯೇಟರ್ ಬ್ಯಾಗ್ರೌಂಡ್ ನಿಂದ ಬಂದವನು. ನಾಟಕಗಳಲ್ಲಿ  ತೊಡಗಿಸಿಕೊಂಡು ತದನಂತರ  ‘ರಂಗಬಿರಂಗಿ’ ಸಿನಿಮಾ  ಮೂಲಕ ಇಂಡಸ್ಟ್ರಿಗೆ ಬಂದೆ. ಇದು ನಾಲ್ಕನೇ ಸಿನಿಮಾ. ಈ ಚಿತ್ರದಲ್ಲಿ ನಾನು ಎಂ.ಬಿ.ಎ ವಿದ್ಯಾರ್ಥಿ. ಒಂದು ಇವೆಂಟ್ ಮುಗಿಸಿಕೊಂಡು ಬರುವಾಗ ಒಬ್ಬ ಅಪರಿಚಿತ ವ್ಯಕ್ತಿಯಿಂದ ತಿರುವು ಸಿಗುತ್ತದೆ. ನನ್ನ ಪಾತ್ರ ಕೂಡ ಬಹಳ ವಿಭಿನ್ನವಾಗಿದೆ.

 ಇನ್ನು ಈ ಚಿತ್ರದಲ್ಲಿ ಮಾಂತೇಶ್ , ಸೀರುಂಡೆ ರಘು,  ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ, ಛಾಯಾಗ್ರಾಹಕ ವೀರೇಶ್, ಸಂಗೀತ ನಿರ್ದೇಶಕ ಎಂ.ಎಸ್. ತ್ಯಾಗರಾಜ್  ವೇದಿಕೆಯಲ್ಲಿ ತಮ್ಮ ಅನುಭವ ಹಂಚಿಕೊಂಡರು. ಬಹಳಷ್ಟು ಕುತೂಹಲವನ್ನು ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಯ ಮೇಲೆ ಬರಲಿದೆ.