ಮನೆ ಮನರಂಜನೆ ನಟ ಶಿವರಾಜ್ ಕುಮಾರ್ ಅವರ ಘೋಸ್ಟ್ ಸಿನಿಮಾದ ಚಿತ್ರೀಕರಣ ಆರಂಭ

ನಟ ಶಿವರಾಜ್ ಕುಮಾರ್ ಅವರ ಘೋಸ್ಟ್ ಸಿನಿಮಾದ ಚಿತ್ರೀಕರಣ ಆರಂಭ

0

ನಟ ಹ್ಯಾಟ್ರಿಕ್ ಹಿರೋ ಶಿವರಾಜ್‌ಕುಮಾರ್‌ ಅವರ ಘೋಸ್ಟ್‌ ಚಿತ್ರದ ಮುಹೂರ್ತ ಸಮಾರಂಭ ಇಂದು ಮಿನರ್ವ ಮಿಲ್‌ನಲ್ಲಿ ನೆರವೇರಿತು.

ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್‌ ಮಾಡಿದರು. ಬೃಂದಾ ಜಯರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಟೋಪಿವಾಲಾ ಖ್ಯಾತಿಯ ಶ್ರೀನಿ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಸಂದೇಶ ನಾಗರಾಜ್‌ ನಿರ್ಮಾಪಕರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅದ್ದೂರಿ ಸೆಟ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಮಿನರ್ವ ಮಿಲ್‌ನಲ್ಲಿ 15 ತರಹದ ಸೆಟ್‌ಗಳನ್ನು ಹಾಗೂ ಮೈಸೂರಿನಲ್ಲಿ 4 ತರಹದ ಸೆಟ್‌ಗಳನ್ನು ಕಲಾ‌ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮಿನರ್ವ ಮಿಲ್‌ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್‌ನಲ್ಲೇ 24 ದಿನಗಳ ಚಿತ್ರೀಕರಣ ನಡೆಯಲಿದೆ.

ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ‘ಘೋಸ್ಟ್‌’ ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಹಿಂದಿನ ಲೇಖನವಿವಾಹೇತರ ಸಂಬಂಧ ಹೊಂದಿದ ಮಹಿಳೆ, ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ: ಲಖನೌ ನ್ಯಾಯಾಲಯ
ಮುಂದಿನ ಲೇಖನಛಾಯಾಚಿತ್ರ ಪ್ರದರ್ಶನ ಹಾಗೂ ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್