ಮನೆ ಮನರಂಜನೆ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟಿ ಶ್ವೇತಾ ತಿವಾರಿ ವಿರುದ್ಧ ತನಿಖೆಗೆ ಆದೇಶ

ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟಿ ಶ್ವೇತಾ ತಿವಾರಿ ವಿರುದ್ಧ ತನಿಖೆಗೆ ಆದೇಶ

0

ಭೋಪಾಲ್: ಕಿರುತೆರೆ ಹಾಗೂ ಬಾಲಿವುಡ್ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ತನಿಖೆ ನಡೆಸಿ ವರದಿ ಸಲ್ಲಿಕೆಗೆ ಆದೇಶಿಸಲಾಗಿದೆ.

ಫ್ಯಾಶನ್ ಸಂಬಂಧಿತ ವೆಬ್ ಸರಣಿಯ ಪ್ರಕಟಣೆಗಾಗಿ ಅವರು ಸ್ಟಾರ್‌ ಕಾಸ್ಟ್ ಮತ್ತು ನಿರ್ಮಾಣ ತಂಡದೊಂದಿಗೆ ಭೋಪಾಲ್ ನಲ್ಲಿರುವ ಶ್ವೇತಾ ತಿವಾರಿ, ಮನೀಶ್ ಹರಿಶಂಕರ್ ನಿರ್ದೇಶನದ ಧಾರಾವಾಹಿಯ ಪ್ರಚಾರದ ವೇಳೆ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ತಮಾಷೆ ಮಾಡುತ್ತಾ, ‘ದೇವರು ನನ್ನ ಬ್ರಾ ಗಾತ್ರವನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶ್ವೇತಾ ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿದ್ದು, ವೀಡಿಯೋ ವೈರಲ್ ಆದ ಬಳಿಕ ಕೆಲವರು ನಟಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶ್ವೇತಾ ತಿವಾರಿ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ಮಧ್ಯ ಪ್ರದೇಶ ಗೃಹ ಸಚಿವ ಡಾ.ನರೋತ್ತಮ್ ಮಿಶ್ರಾ ಆಕ್ರೋಶ ವ್ಯಕ್ತಪಡಿಸಿದ್ದು, ‘ನಾನು ಶ್ವೇತಾ ತಿವಾರಿ ಹೇಳಿಕೆಯನ್ನು ಖಂಡಿಸುತ್ತೇನೆ. ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಆ ಬಳಿಕ ನಟಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಉಲ್ಬಣಗೊಂಡ ಕೊರೊನಾ: ದಕ್ಷಿಣ ಕನ್ನಡದಲ್ಲಿ 12 ಶಾಲೆಗಳು ಬಂದ್
ಮುಂದಿನ ಲೇಖನಮಾರ್ಚ್‌ 3ರಿಂದ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ