ಮನೆ ಮನರಂಜನೆ ಹೃದಯಾಘಾತದಿಂದ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ

ಹೃದಯಾಘಾತದಿಂದ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ

0

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ.

ಸ್ನೇಹಿತರು ಮತ್ತು ಕುಟುಂಬದವರ ಜೊತೆ ತೆರಳಿದ್ದಾಗ  ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ  ಪ್ರೀತಿಸಿ  ಮದುವೆಯಾಗಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ. 

ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದೆ. ಮೂರು ದಿನಗಳ ಹಿಂದೆ ಸ್ಪಂದನಾ ಅವರು ಬ್ಯಾಂಕಾಕ್ ಗೆ ತೆರಳಿದ್ದರು. ನಿನ್ನೆ ಬ್ಯಾಂಕಾಕ್ ನಲ್ಲಿ ಹೃದಯಾಘಾತವಾಗಿ, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ಲೋ ಬಿಪಿ ಹಾಗೂ ಹೃದಯಾಘಾತ ಆಗಿತ್ತು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ವಿಜಯರಾಘವೇಂದ್ರ ಕುಟುಂಬದವರು ಬ್ಯಾಂಕಾಕ್ ಗೆ ತೆರಳಿದ್ದಾರೆ.

2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಸ್ಪಂದನಾ ಅವರ ಸಹೋದರ  ರಕ್ಷಿತ್ ಶಿವರಾಂ ಇತ್ತೀಚೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಸ್ಪಂದನಾ ಸಹೋದರನ ಪರ ಪ್ರಚಾರ ನಡೆಸಿದ್ದರು.