ಬೆಂಗಳೂರು (Bengaluru)- ಕನ್ನಡ ಚಲನಚಿತ್ರರಂಗದ ಹಿರಿಯ ನಟಿ (Actress) ಲಕ್ಷ್ಮಿ (Lakshmi) ಅವರ ಜೀವಮಾನ ಸಾಧನೆಗೆ ಡಾ.ರಾಜಕುಮಾರ್ ಪ್ರಶಸ್ತಿ (Dr. Rajakumar Award), ಖ್ಯಾತ ನಿರ್ದೇಶಕ (Director ) ಎಸ್.ನಾರಾಯಣ್ (S.Narayan) ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ (Putnam Kanagal Award) ಒಲಿದು ಬಂದಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ ಹಾಗೂ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವಿಷ್ಣು ವರ್ಧನ ಪ್ರಶಸ್ತಿಯನ್ನು ದಿ.ಜಿ.ಎಂ.ಲಕ್ಷ್ಮೀಪತಿ ಅವರಿಗೆ ಘೋಷಿಸಲಾಯಿತು. ಪ್ರಶಸ್ತಿಯನ್ನು ಲಕ್ಷ್ಮೀಪತಿ ಅವರ ಪರವಾಗಿ ಅವರ ಪುತ್ರ ರಾಮ್ ಪ್ರಸಾದ್ ಅವರು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಮ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಆಯುಕ್ತ ಡಾ. ಪಿ.ಎಸ್.ಹರ್ಷ, ಚಿನ್ನೇಗೌಡ ಇತರರು ಉಪಸ್ಥಿತರಿದ್ದರು.