ಮನೆ ರಾಜ್ಯ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್..!

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್..!

0

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಬಿಡುಗಡೆ ಕೋರಿ ಮೂವರು ಆರೋಪಿಗಳು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ಪೀಠ, ಅರ್ಜಿದಾರರ ವಾದವನ್ನು ತಳ್ಳಿ ಹಾಕಿದೆ.

ಬಂಧನ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಮೂವರು ಆರೋಪಿಗಳ ಬಂಧನ ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಹೀಗಾಗಿ, ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ಸಿಗದಂತಾಗಿದೆ. ಈ ಪ್ರಕರಣದ ತನಿಖೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.