ಮನೆ ಅಪರಾಧ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ

0

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟಿ ರನ್ಯಾ ರಾವ್ ಅವರು, ಜೈಲುಪಾಲಾಗಿದ್ದಾರೆ. ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಮ್ಯಾಜಿಸ್ಟ್ರೇಟ್, ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಈಗ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಅವರು ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಹಾಗೂ ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು.

ಈ ಹಿನ್ನಲೆಯಲ್ಲಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಟಿ ರನ್ಯಾ ರಾವ್ ಸಲ್ಲಿಸಿರುವಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುವಂತ ಹೈಕೋರ್ಟ್, ಜಾಮೀನು ನೀಡುತ್ತೋ ಅಥವಾ ವಜಾಗೊಳಿಸುತ್ತೋ ಎಂಬುದನ್ನು ಕಾದು ನೋಡಬೇಕಿದೆ.