ತಮಿಳುನಾಡು ಇಂದು ಸೋಮವಾರ (ಮೇ 4) ರಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ತಮಿಳಗ ವೆಟ್ರಿ ಕಳಗಂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಚೆನ್ನೈನ ಪಕ್ಷದ ಪ್ರಧಾನ ಕಚೇರಿ ಎದುರು ಜಮಾಯಿಸಿರುವ ಟಿವಿಕೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪಕ್ಷದ ಧ್ವಜಗಳನ್ನು ಬೀಸುತ್ತಾ, ಸಾರ್ವಜನಿಕರಿಗೆ ಸಿಹಿ ಹಂಚಿ ತಮ್ಮ ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಒಟ್ಟು 234 ಕ್ಷೇತ್ರಗಳ ಪೈಕಿ ಟಿವಿಕೆ ಸದ್ಯ 111 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿವಿಕೆ ಕಚೇರಿ ಮುಂದೆ ಕಾರ್ಯಕರ್ತರು ಸಾಗರದಂತೆ ಸೇರಿ, ಘೋಷಣೆ ಕೂಗುತ್ತಾ, ನೃತ್ಯ ಮಾಡುತ್ತಾ ಸಂಭ್ರಮಿಸುತ್ತಿರುವ ದೃಶ್ಯಗಳು ಕಂಡುಬರುತ್ತಿವೆ ಎನ್ನಲಾಗಿದೆ. ಇತ್ತ ಮತ ಎಣಿಕೆ ಬಿರುಸಿನಿಂದ ಸಾಗುತ್ತಿರುವಾಗಲೇ, ಟಿವಿಕೆ ಅಧ್ಯಕ್ಷ ವಿಜಯ್ ಅವರ ಮನೆಗೆ ನಟಿ ತ್ರಿಶಾ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ವಿಜಯ್ ಅವರಿಗೆ ಶುಭ ಹಾರೈಸಲು ಅವರು ಅಲ್ಲಿಗೆ ಹೋಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೋರಕ್ಕಿದೆ ಎನ್ನಬಹುದು. ಇಂದು ಬೆಳಗ್ಗೆ ತಿರುಪತಿಯಲ್ಲಿ ದೇವರ ದರ್ಶನ ಮುಗಿಸಿದ ಕೂಡಲೇ ತ್ರಿಶಾ, ನೇರವಾಗಿ ವಿಜಯ್ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಇದರ ಜೋತೆಗೆ ಇಂದು ತ್ರಿಶಾ ಅವರ ಹುಟ್ಟುಹಬ್ಬ ಕೂಡ ಹೌದು ಎಂಬುದು ವಿಶೇಷವಾಗಿದೆ ಎನ್ನಲಾಗುತ್ತಿದೆ .













