ಮನೆ ಉದ್ಯೋಗ ಏರೋನಾಟಿಕಲ್ ಡೆವಲಪ್’ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಏರೋನಾಟಿಕಲ್ ಡೆವಲಪ್’ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಏರೋನಾಟಿಕಲ್ ಡೆವಲಪ್’ಮೆಂಟ್ ಏಜೆನ್ಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 11, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್’ಲೈನ್/ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹೈದರಾಬಾದ್, ನವದೆಹಲಿ ಹಾಗೂ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಹುದ್ದೆಯ ಮಾಹಿತಿ:

ಅಸಿಸ್ಟೆಂಟ್- 11

ಸ್ಟೆನೋಗ್ರಾಫರ್-3

ವಿದ್ಯಾರ್ಹತೆ:

ಅಸಿಸ್ಟೆಂಟ್- ಆರ್ಟ್ಸ್/ಕಾಮರ್ಸ್/ಸೈನ್ಸ್/ ಬ್ಯುಸಿನೆಸ್ ಅಸ್ಮಿನಿಸ್ಟ್ರೇಶನ್/ ಬ್ಯುಸಿನೆಸ್ ಮ್ಯಾನೇಜ್ಮೆಂಟ್ನಲ್ಲಿ ಪದವಿ

ಸ್ಟೆನೋಗ್ರಾಫರ್- ಸೆಕ್ರೆಟರಿಯಲ್/ ಕಮರ್ಷಿಯಲ್ ಪ್ರಾಕ್ಟೀಸ್ನಲ್ಲಿ ಡಿಪ್ಲೋಮಾ, ಆರ್ಟ್ಸ್/ಕಾಮರ್ಸ್/ ಸೈನ್ಸ್/ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್/ ಬ್ಯುಸಿನೆಸ್ ಮ್ಯಾನೇಜ್ಮೆಂಟ್ನಲ್ಲಿ ಪದವಿ.

ವಯೋಮಿತಿ:

ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 11, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಸಂಬಳ:

ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 25,500-81,100 ವೇತನ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಹೈದರಾಬಾದ್ ಹಾಗೂ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸ್ಕಿಲ್ ಟೆಸ್ಟ್

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 31ಕ್ಕೆ ಮುಂಚಿತವಾಗಿ ಕಳುಹಿಸಬೇಕು.

ಜಂಟಿ ನಿರ್ದೇಶಕರು (A&E)’

ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ

ವಿಭೂತಿಪುರ

ಮಾರತಹಳ್ಳಿ ಅಂಚೆ

ಬೆಂಗಳೂರು-560037

ಆನ್’ಲೈನ್ ಮೂಲಕ ಅರ್ಜಿ ಹಾಕಲು ಜನವರಿ 11, 2023 ಕೊನೆಯ ದಿನವಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/12/2022

ಅರ್ಜಿ ಸಲ್ಲಿಸಲು ಕೊನೆಯ ದಿನ(ಆನ್’ಲೈನ್)-11/01/2023

ಅರ್ಜಿ ಸಲ್ಲಿಸಲು ಕೊನೆಯ ದಿನ (ಆಫ್’ಲೈನ್)- 31/01/2023

ಹಿಂದಿನ ಲೇಖನಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ನಿಧನ
ಮುಂದಿನ ಲೇಖನಭೀಕರ ಅಪಘಾತ: ರಿಷಬ್ ಪಂತ್’ಗೆ ಗಂಭೀರ ಗಾಯ