ಮನೆ ರಾಜ್ಯ ಎಸ್’ಸಿ, ಎಸ್’ಟಿ ಮೀಸಲು ಹೆಚ್ಚಳ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ಎಸ್’ಸಿ, ಎಸ್’ಟಿ ಮೀಸಲು ಹೆಚ್ಚಳ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

0

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.

ಪರಿಶಿಷ್ಟ ಜಾತಿಗೆ ಶೇ 15ರಿಂದ ಶೇ 17, ಪರಿಶಿಷ್ಟ ಪಂಗಡಕ್ಕೆ ಶೇ 3ರಿಂದ ಶೇ7ರಷ್ಟು ಮೀಸಲಾತಿ ಹೆಚ್ಚಿಸಿ ರಾಜ್ಯ ಸರ್ಕಾರ ಮಾಡಿದ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ–2022’ನ್ನು ಸಂವಿಧಾನದ ಶೆಡ್ಯೂಲ್‌ 9ರಲ್ಲಿ ಸೇರಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರಿಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಪತ್ರ ಬರೆದಿದ್ದಾರೆ.

ಕಾಯ್ದೆಯ ಪ್ರತಿ ಸಹಿತ ಗುರುವಾರ ಪತ್ರ ಬರೆದಿರುವ ಅವರು, ಕಾಯ್ದೆಯನ್ನು ಸಂವಿಧಾನದ ಶೆಡ್ಯೂಲ್‌ 9ರಲ್ಲಿ ಸೇರಿಸಲು ಫೆ. 9ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ತೀರ್ಮಾನವನ್ನೂ ಉಲ್ಲೇಖಿಸಿದ್ದಾರೆ.

ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಹೀಗಾಗಿ, ಕಾಯ್ದೆಯನ್ನು ತಮಗೆ ಕಳುಹಿಸುತ್ತಿದ್ದೇನೆ ಎಂದೂ ಪತ್ರದಲ್ಲಿ ಅವರು ತಿಳಿಸಿದ್ದಾರೆ.