ಮನೆ ಸ್ಥಳೀಯ  ವ್ಯಸನ ಮುಕ್ತ ದಿನಾಚರಣೆ ಮತ್ತು ವಿಚಾರ ಸಂಕಿರಣ

 ವ್ಯಸನ ಮುಕ್ತ ದಿನಾಚರಣೆ ಮತ್ತು ವಿಚಾರ ಸಂಕಿರಣ

0

ಯುವಜನರು ಮಾದಕ ವ್ಯಸನದಿಂದ ದೂರವಿರಿ: ಡಾ.ಪಿ.ಸಿ ಕುಮಾರ್ ಸ್ವಾಮಿ

ಮೈಸೂರು: ಜೀವನದಲ್ಲಿ ಆರೋಗ್ಯ ಎಂಬುದು ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಬಹುಮುಖ್ಯ ಅಂಶವಾಗಿದೆ. ಆದ್ದರಿಂದ ಯುವಜನರು ಮಾದಕ ವ್ಯಸನದಿಂದ ದೂರವಿರಿ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ.ಸಿ ಕುಮಾರ್ ಸ್ವಾಮಿ ಅವರು ತಿಳಿಸಿದರು.

Join Our Whatsapp Group


ನಗರದ ಜೆ.ಸಿ ಇಂಜಿನಿಯರಿoಗ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯ ಮತ್ತು ಜಯಚಾಮರಾಜೇಂದ್ರ ಇಂಜಿನಿಯರಿoಗ್ ಕಾಲೇಜು ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಸುಮಾರು 27 % ಜನರು ಕೆಟ್ಟ ಚಟಗಳಿಗೆ ಒಳಗಾಗಿದ್ದಾರೆ. ಪ್ರಮುಖವಾಗಿ ತಂಬಾಕು ಮತ್ತು ತಂಬಾಕು ಉತ್ಪನಗಳು, ಮದ್ಯಪಾನ, ಗಾಂಜಾ ಹಾಗೂ ಮುಂತಾದ ಮಾದಕ ವಸ್ತುಗಳನ್ನು ಹೆಚ್ಚಿನ ರೀತಿಯಲ್ಲಿ ಬಳಕೆ ಮಾಡಲಾಗುತ್ತಿದೆ. ಸರ್ವತೋಮುಖ ಆರೋಗ್ಯವು ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರ ಸೀಮಿತವಾಗಿರದೇ, ಆಧ್ಯಾತ್ಮಿಕ, ಸಾಮಾಜಿಕ, ಆರ್ಥಿಕ, ಭೌತಿಕ ಹಾಗೂ ಮಾನಸಿಕ ಆರೋಗ್ಯವನ್ನು ಒಳಗೊಳ್ಳುತ್ತದೆ ಎಂದು ತಿಳಿಸಿದರು.
ಮಾದಕ ವಸ್ತುಗಳನ್ನು ಸೇವಿಸುವ ಯುವ ಪೀಳಿಗೆಯ ವರ್ಗವು ಪ್ರಾರಂಭಿಕ ಹಂತದಿoದ ಚಟವಾಗಿ ಪರಿಣಮಿಸುವ ವರೆಗೆ ಅಭ್ಯಾಸ ಮಾಡಿಕೊಳ್ಳುವುದು ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಆರ್ಥಿಕವಾಗಿ ದಿವಾಳಿಯಾಗುವುದು ಮತ್ತು ದೇಹದಲ್ಲಿನ ಅಂಗಾoಗಗಳ ಮೇಲೆ ವ್ಯತ್ತಿರಿಕ್ತವಾದ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ವ್ಯಸನ ಮುಕ್ತ ಸಮುದಾಯ ನಿರ್ಮಾಣಕ್ಕಾಗಿ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.
ಸರ್ಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಮೈಸೂರಿನಲ್ಲಿ ಖಾಸಗಿ ಸಂಸ್ಥೆಗಳು, ವಿದ್ಯಾರ್ಥಿಗಳು ಜೊತೆಗೂಡಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯನ್ನು ವ್ಯಸನ ಮುಕ್ತ ಮಾಡುವ ಉದ್ದೇಶದಿಂದ ಡಾ. ಮಹಂತ ಶಿವಯೋಗಿಗಳ ರೀತಿಯಲ್ಲಿ ನಾವು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಮೈಸೂರು ತಾಲೂಕಿನ ತಹಸಿಲ್ದಾರರಾದ ಗಿರೀಶ್ ಅವರು ಮಾತನಾಡಿ, ಉತ್ತಮ ಸಮಾಜವನ್ನು ನಿರ್ಮಿಸಲು ಯುವಕರಿಂದ ಸಾಧ್ಯ. ಯುವಕರು ಮಾದಕ ವಸ್ತುಗಳಿಗೆ ಮಾರು ಹೋಗದೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಮದ್ಯಪಾನ, ಮಾದಕ ವಸ್ತುಗಳ ಸೇವನೆಗಳನ್ನು ತೊರೆದರೆ ಮಾತ್ರ ಯುವ ಪೀಳಿಗೆಯ ಸಮಾಜದ ಉತ್ತಮ ಹಾದಿಯಲ್ಲಿ ನಡೆಯಲು ಸಾಧ್ಯ ಎಂದರು.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತುಗಳಿಗೆ ಮಾರು ಹೋಗುತ್ತಿರುವುದು ವಿಷಾದನೀಯ. ತಮ್ಮ ಸುತ್ತಮುತ್ತಲಿನ ವಾತಾವರಣವು ಆರೋಗ್ಯಕರವಾಗಿದ್ದಾಗ ಯಾವುದೇ ರೀತಿಯ ಅಹಿತಕರ ಆಲೋಚನೆಗಳು ಸುಳಿಯುವುದಿಲ್ಲ. ಸ್ವಾಸ್ಥ್ಯ  ಬದುಕು ಹಾಗೂ ಸಮುದಾಯವನ್ನು ನಿರ್ಮಿಸಲು ಆರೋಗ್ಯದ ಜೊತೆ ಮಾನವೀಯ ಮೌಲ್ಯಗಳು, ಉತ್ತಮ ಆಯ್ಕೆ ಹಾಗೂ ದೃಢ ನಿರ್ಧಾರಗಳು ಕಾರಣವಾಗುತ್ತವೆ. ಇದರಿಂದ ಜೀವನದಲ್ಲಿ ಉತ್ತಮ ಘಟ್ಟವನ್ನು ತಲುಪಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ.ಸುಧಾರಾಣಿ ನಾಯಕ್ ಅವರು ಮದ್ಯಪಾನ, ಮಾದಕ ವಸ್ತುಗಳು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಅಶೋಕ್ ಕುಮಾರ್.ಡಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ಮಹದೇವ ಪ್ರಸಾದ್, ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಡೀನ್ ಡಾ. ಮನೋಜ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುನೀಲ್ ಕುಮಾರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು. 

ಹಿಂದಿನ ಲೇಖನನಿಮಿಷಾಂಭ ದೇವಾಲಯದ ಹುಂಡಿ ಎಣಿಕೆ.43ಲಕ್ಷ ರೂ ಸಂಗ್ರಹ
ಮುಂದಿನ ಲೇಖನಆದೇಶ ಉಲ್ಲಂಘಿಸಿ ದಶಪಥ ಹೆದ್ದಾರಿಗಿಳಿದ ಬೈಕ್ ಗಳು: ದಂಡ ವಸೂಲಿ