ಮನೆ ಸ್ಥಳೀಯ ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬoಧ ರಾಜಕೀಯ ಪಕ್ಷಗಳ ಮುಖಂಡರುಗಳೊoದಿಗೆ ಸಭೆ

ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬoಧ ರಾಜಕೀಯ ಪಕ್ಷಗಳ ಮುಖಂಡರುಗಳೊoದಿಗೆ ಸಭೆ

0

ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಬಗೆಗೆ ಯಾವುದೇ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ದರಪಟ್ಟಿ ಸಂಬoಧ ಹಮ್ಮಿಕೊಂಡಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಮಾಡಬೇಕಾದ ಖರ್ಚು ವೆಚ್ಚಗಳ ಕುರಿತ ದರಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಅವುಗಳಲ್ಲಿ ಯಾವುದೇ ಸಾಮಗ್ರಿಗಳ ದರ ವ್ಯತ್ಯಾಸ ಕಂಡುಬoದರೆ ತಿಳಿಸಬಹುದಾಗಿದೆ ಎಂದರು.

 ಸಾರ್ವಜನಿಕ ಸ್ಥಳಗಳಲ್ಲಿ ಸಂಬoಧಿಸಿದ ಪ್ರಾಧಿಕಾರಗಳ ಅನುಮತಿ ಇಲ್ಲದೇ ಪ್ಲೆಕ್ಸ್ ಬ್ಯಾನರ್‌ಗಳನ್ನು ಅಳವಡಿಸುವಂತಿಲ್ಲ. ಗೋಡೆಗಳ ಮೇಲೆ ಸ್ಟಿಕ್ಕರ್‌ಗಳನ್ನು ಅಂಟಿಸುವoತಿಲ್ಲ. ಅನುಮತಿ ಇಲ್ಲದೆ ಪ್ಲೆಕ್ಸ್ ಬ್ಯಾನರ್ ಗಳನ್ನು ಮುದ್ರಣ ಮಾಡುವಂತಿಲ್ಲ. ನಿಯಮ ಉಲ್ಲಂಘನೆಗೆ ಮಾಡಿದರೆ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಲು ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಮರಣ ಹೊಂದಿರುವವರ ಹೆಸರನ್ನು ತೆಗೆದು ಹಾಕಲು ಅವಕಾಶವಿದ್ದು, ವೋಟರ್ ಹೆಲ್ಪ್ಲೈನ್ ಆಪ್ ಹಾಗೂ ಭೂತ್ ಲೆವೆಲ್ ಅಧಿಕಾರಿಗಳ ಬಳಿ ಸೇರ್ಪಡೆ ಮಾಡಿಸಬಹುದಾಗಿದೆ. ಶಿಕ್ಷಕರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅವಕಾಶ ಇದ್ದು, ಸೇರ್ಪಡೆ ಮಾಡಲು ಜಾಗೃತಿ ಮೂಡಿಸಿ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್ ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.