ಮನೆ ಸ್ಥಳೀಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕೊರತೆಯಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡಿ: ಅಂಜುಂ ಪರ್ವೆಜ್

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕೊರತೆಯಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡಿ: ಅಂಜುಂ ಪರ್ವೆಜ್

0

  ಮೈಸೂರು: ಬೋರ್ ವೆಲ್ ಗಳನ್ನು ಕೊರೆಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕೊರತೆಯಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್ ಅವರು ತಿಳಿಸಿದರು.

  Join Our Whatsapp Group

  ಅವರು ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಜೆಜೆಎಂ, ಕುಡಿಯುವ ನೀರು, ಮ-ನರೇಗಾ ಮತ್ತು ಎಸ್ ಬಿಎಮ್(ಗ್ರಾಮೀಣ) ಯೋಜನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

  ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನೀರಿನ ಪರೀಕ್ಷೆ (WQMS), ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ ಕುರಿತು ಪರಿಶೀಲಿಸಿದರು.

  ಮ-ನರೇಗಾ ಯೋಜನೆಯ ಕ್ರಿಯಾ ಯೋಜನೆ ಕುರಿತು ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ ಮಾಡಿದರು.

  ಅನುಷ್ಠಾನ ಇಲಾಖೆಗಳಲ್ಲಿ ಹೆಚ್ಚಾಗಿ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಸೂಚನೆ ನೀಡಿದರು. ಮ-ನರೇಗಾ ಯೋಜನೆಯಡಿ ಹೆಚ್ಚಿನ ಆಸ್ತಿಗಳ ಸೃಜನೆ ಮತ್ತು ಈಗಾಗಲೇ ಸೃಜಿಸಿರುವ ಆಸ್ತಿಗಳ ನಿರ್ವಹಣೆ ಮಾಡಲು ತಿಳಿಸಿದರು.

  ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಬೂದು ನೀರು ನಿರ್ವಹಣಾ ಘಟಕ ಕುರಿತು ಹಾಗೂ ಸಮುದಾಯ ಬಚ್ಚಲು ಗುಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಿದರು.

  ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಣೆ, ಸಕಾಲ, ಬಾಪೂಜಿ ಸೇವಾ ಕೇಂದ್ರ ಮತ್ತು ಡಿಜಿಟಲ್ ಲೈಬ್ರರಿ ಕುರಿತು ಚರ್ಚಿಸಲಾಯಿತು.‌

  ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಉಪಕಾರ್ಯದರ್ಶಿ(ಆಡಳಿತ) ನಾಗರಾಜು, ಉಪಕಾರ್ಯದರ್ಶಿ(ಅಭಿವೃದ್ಧಿ) ಜಗನ್ನಾಥ್ ಮೂರ್ತಿ, ಮುಖ್ಯ ಯೋಜನಾಧಿಕಾರಿ ಮಂಜುನಾಥ್ ಅಂಗಡಿ, ಮುಖ್ಯ ಲೆಕ್ಕಾಧಿಕಾರಿ ಜಿ. ಬಸವರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಂಜಿತ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯತ್‌ ರಾಜ್‌ ಇಂಜಿನಿಯರ್‌ ವಿಭಾಗದ ಕಾರ್ಯಪಾಲಕಾ ಅಭಿಯಂತರರು, ಮ-ನರೇಗಾ ಯೋಜನೆಯ ಅನುಷ್ಠಾನ ಇಲಾಖಾ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿಗಳ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಗ್ರಾ.ಉ) ಸೇರಿದಂತೆ ಜಿಲ್ಲಾಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

  ಹಿಂದಿನ ಲೇಖನಮೈಸೂರು: ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿ ಪರಿಶೀಲನೆ
  ಮುಂದಿನ ಲೇಖನಹಾಸನ ಅಶ್ಲೀಲ ವಿಡಿಯೋ, ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಸಿಬಿಐ ತನಿಖೆ ಕೋರಿ ರಾಜ್ಯಪಾಲರಿಗೆ ದೂರು ಕೊಟ್ಟ ಜೆಡಿಎಸ್