
ಮಂಗಳೂರು(Mangalore): ಸುರತ್ಕಲ್ ಮತ್ತು ಕಾಟಿಪಳ್ಳ ಭಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಭೇಟಿ ನೀಡಿದರು.
ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ನಂತರ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ಸುರತ್ಕಲ್ ಪೇಟೆಯಲ್ಲಿ ಸಾರ್ವಜನಿಕರೊಂದಿಗೆ ಅವರು ಸಂವಹನ ನಡೆಸಿದರು.
ಅಂಗಡಿಗಳು, ವ್ಯಾಪಾರ ಸಂಕೀರ್ಣಗಳಿಗೆ ಭೇಟಿ ಕೊಟ್ಟು ಸಮಾಲೋಚನೆ ನಡೆಸಿದರು. ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಪೊಲೀಸರನ್ನು ಭೇಟಿ ಮಾಡಿದರು.
ನಂತರ ಮಂಗಳೂರು ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಮಂಗಳೂರು ಜೈಲಿಗೂ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದು ವಾರದಲ್ಲಿ ಇದು ಅವರ ಎರಡನೇ ಭೇಟಿಯಾಗಿದೆ.














