ಮನೆ ಮನರಂಜನೆ ಜೂನ್ 6 ರಂದು ತಿರುಪತಿಯಲ್ಲಿ ‘ಆದಿಪುರುಷ್’ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

ಜೂನ್ 6 ರಂದು ತಿರುಪತಿಯಲ್ಲಿ ‘ಆದಿಪುರುಷ್’ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

0

ಬಾಲಿವುಡ್ ನಿರ್ದೇಶಕ ಓಂ ರಾವತ್ ನಿರ್ದೇಶನದ ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Join Our Whatsapp Group

ಈ ಸಿನಿಮಾದಲ್ಲಿ ಪ್ರಭಾಸ್ ರಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ‘ಆದಿಪುರುಷ್’ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಅದ್ದೂರಿಯಾಗಿ ಆಯೋಜಿಸಲು ಪ್ಲಾನ್ ಸಿದ್ಧಗೊಂಡಿದೆ.

ತಿರುಪತಿಯಲ್ಲಿ ಜೂನ್ 6ರಂದು ‘ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಈ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದು, ದೊಡ್ಡ ದೊಡ್ಡ ಸ್ಟಾರ್​ಗಳು ಈ ಕಾರ್ಯಕ್ರಮಕ್ಕೆ ಹಾಜರಿ ಹಾಕುವ ನಿರೀಕ್ಷೆ ಇದೆ.

‘ಆದಿಪುರುಷ್​’ ಚಿತ್ರತಂಡ ಈಗಾಗಲೇ ಸಂದರ್ಶನ ನೀಡುವುದರಲ್ಲಿ ಬ್ಯುಸಿಯಾಗಿದೆ. ಈ ಸಿನಿಮಾ ರಾಮಾಯಣ ಆಧರಿಸಿ ಸಿದ್ಧಗೊಳ್ಳುತ್ತಿದೆ. ‘ಆದಿಪುರುಷ್’ ಸಿನಿಮಾ ಪ್ರಭಾಸ್ ಕೆರಿಯರ್​​ನಲ್ಲಿ ದೊಡ್ಡ ಚಿತ್ರ. ಈ ಸಿನಿಮಾಗಾಗಿ 550 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ.

ಇತ್ತೀಚೆಗೆ ‘ಆದಿಪುರುಷ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ತೆರೆಕಾಣಲಿದೆ. ಮೊದಲ ದಿನ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.

ಹಿಂದಿನ ಲೇಖನಬಂಟ್ವಾಳ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ
ಮುಂದಿನ ಲೇಖನಸಿದ್ದರಾಮಯ್ಯ ಅವರ ಕುರಿತು ವಿವಾದಾತ್ಮಕ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು