ಮನೆ ರಾಷ್ಟ್ರೀಯ ಪಕ್ಷ ತೊರೆದು ಚುನಾವಣೆ ಎದುರಿಸಿ ಬಂಡಾಯ ಶಾಸಕರಿಗೆ ಆದಿತ್ಯ ಠಾಕ್ರೆ ಸವಾಲು

ಪಕ್ಷ ತೊರೆದು ಚುನಾವಣೆ ಎದುರಿಸಿ ಬಂಡಾಯ ಶಾಸಕರಿಗೆ ಆದಿತ್ಯ ಠಾಕ್ರೆ ಸವಾಲು

0

ಮುಂಬೈ (Mumbai): ಪಕ್ಷವನ್ನು ತೊರೆದು ಚುನಾವಣೆ ಎದುರಿಸಲಿ ಎಂದು ಬಂಡಾಯ ಶಾಸಕರಿಗೆ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಸವಾಲು ಹಾಕಿದ್ದಾರೆ.

ಶಿವಸೇನಾ ಬಂಡಾಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ನಿಮಗೆ ಧೈರ್ಯವಿದ್ದರೆ ಶಿವಸೇನಾ ಬಿಟ್ಟು ತೊಲಗಿ. ಪಕ್ಷಾಂತರ ಮಾಡಿ ಹೋರಾಡಿ ಎಂದು ಹೇಳಿದ್ದಾರೆ.

ನಾವು ಮಾಡಿದ್ದು ತಪ್ಪು, ಉದ್ಧವ್ ಠಾಕ್ರೆ ನೇತೃತ್ವದ ನಾಯಕತ್ವವೇ ತಪ್ಪು ಎಂದು ನೀವು ಭಾವಿಸುವುದಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಿ. ನಿಮ್ಮನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

ಸಚಿವ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಅವರು ಉದ್ಧವ್‌ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದಾರೆ.

288 ಸದಸ್ಯರನ್ನು ಒಳಗೊಂಡಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನಾ 55 ಶಾಸಕರ ಬಲ ಹೊಂದಿದೆ. ಎನ್‌ಸಿಪಿ 53, ಕಾಂಗ್ರೆಸ್‌ನ 44, ಬಹುಜನ ವಿಕಾಸ ಆಘಾಡಿ 3, ಸಮಾಜವಾದಿ ಪಕ್ಷ, ಎಐಎಂಐಎಂ ಹಾಗೂ ಪ್ರಹಾರ್‌ ಜನಶಕ್ತಿ ಪಾರ್ಟಿಯ ತಲಾ ಇಬ್ಬರು ಶಾಸಕರಿದ್ದಾರೆ.

ಎಂಎನ್‌ಎಸ್‌, ಸಿಪಿಐ (ಎಂ), ಪಿಡಬ್ಲ್ಯುಪಿ, ಸ್ವಾಭಿಮಾನಿ ಪಕ್ಷ, ರಾಷ್ಟ್ರೀಯ ಸಮಾಜ ಪಾರ್ಟಿ, ಜನಸೂರ್ಯ ಶಕ್ತಿ ಪಾರ್ಟಿ ಹಾಗೂ ಕ್ರಾಂತಿಕಾರಿ ಶೆತಕರಿ ಪಕ್ಷದಿಂದ ತಲಾ ಒಬ್ಬರು ಶಾಸಕರಿದ್ದಾರೆ. 13 ಮಂದಿ ಪಕ್ಷೇತರ ಶಾಸಕರು ಹಾಗೂ ವಿರೋಧ ಪಕ್ಷ ಬಿಜೆಪಿಯಲ್ಲಿ 106 ಶಾಸಕರಿದ್ದಾರೆ.

ಹಿಂದಿನ ಲೇಖನಅರಣ್ಯ ಸಂರಕ್ಷಣಾ ಕಾಯಿದೆಯಲ್ಲಿ ‘ಡೀಮ್ಡ್‌ ಫಾರೆಸ್ಟ್‌’ ಪರಿಕಲ್ಪನೆಯೇ ಇಲ್ಲ ಹೈಕೋರ್ಟ್‌
ಮುಂದಿನ ಲೇಖನಶೀಘ್ರದಲ್ಲೇ 200 ಕೋಟಿ ಕೋವಿಡ್ ಲಸಿಕೆ ಗುರಿ ತಲುಪಲಿರುವ ಭಾರತ: ಪ್ರಧಾನಿ ಮೋದಿ