ಮನೆ ಅಪರಾಧ ಅನೈತಿಕ ಸಂಬಂಧ ಶಂಕೆ: ಪತ್ನಿಯನ್ನು ಕೊಂದ ಪತಿ

ಅನೈತಿಕ ಸಂಬಂಧ ಶಂಕೆ: ಪತ್ನಿಯನ್ನು ಕೊಂದ ಪತಿ

0

ರಾಯಚೂರು(Raichuru): ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಅನುಮಾನದಿಂದಾಗಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ಇಂದು ನಡೆದಿದೆ.

ರೇಣುಕಾ(26) ಪತಿಯಿಂದ ಹತ್ಯೆಗೀಡಾದ ದುರ್ದೈವಿ. ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

ಜೆಟ್ಟಪ್ಪ ತನ್ನ ಪತ್ನಿ ರೇಣುಕಾ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಸಂಶಯಗೊಂಡು ಇಂದು ಬೆಳಗ್ಗೆ ಮನೆಯಲ್ಲಿದ್ದ ಕೊಡಲಿಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಲಿಂಗಸೂಗೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರೆಸಿದ್ದಾರೆ.

ಹಿಂದಿನ ಲೇಖನಗ್ರೆನೇಡ್ ಎಸೆದು ಉಗ್ರರು ಪರಾರಿ: ಉಗ್ರರ ಅಡಗು ತಾಣ ನಾಶಗೊಳಿಸಿದ ಭದ್ರತಾ ಪಡೆ
ಮುಂದಿನ ಲೇಖನಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ: ನಗರಸಭಾ ಸದಸ್ಯನ ವಿರುದ್ಧ ದೂರು ದಾಖಲು