ಮುಂಬೈ : ಮಹಾರಾಷ್ಟ್ರದ ಪುಣೆಯಲ್ಲಿರುವ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಮತ್ತೊಂದು ವಿಮಾನ ಪತನಗೊಂಡಿದೆ. ರೆಡ್ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಲ್ಯಾಂಡಿಂಗ್ ಮಾಡುವಾಗ ಪತನಗೊಂಡಿದೆ. ಈ ಘಟನೆಯಲ್ಲಿ ತರಬೇತಿ ನಿರತ ಪೈಲಟ್ ಯಾವುದೇ ಗಂಭೀರ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಬುಧವಾರ ವಿಮಾನ ಪತನಗೊಂಡಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ವಿಮಾನವು ಕಡಿಮೆ ಎತ್ತರದಲ್ಲಿ ಹಾರುತ್ತಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿದಾಗ ವಿಮಾನದ ಒಂದು ಭಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದೆ. ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

















