ಮನೆ ರಾಜ್ಯ ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಎರಡು ಸಮುದಾಯದ ನಡುವೆ ಮಾರಾಮಾರಿ

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಎರಡು ಸಮುದಾಯದ ನಡುವೆ ಮಾರಾಮಾರಿ

0

ಕಲಬುರಗಿ : ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಘಟನೆ ನಡೆದಿದೆ. ರಾವೂರ್ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುವ ವೇಲೆ ಮತ್ತೊಂದು ಸಮುದಾಯ ಕಿರಿಕದ ಮಾಡಿದೆ.

ಸೌಂಡ್ ಕಡಿಮೆ ಮಾಡುವಂತೆ ಕಿರಿಕ್ ಮಾಡಿದ್ದು, ಬಳಿಕ ಎರಡು ಸಮುದಾಯದ ನಡುವೆ ಕಟ್ಟಿಗೆ, ಕಲ್ಲುಗಳಿಂದ ಹೊಡೆದಾಟ ನಡೆದಿದೆ. ಈ ಘಟನೆಯಲ್ಲಿ ಮೂರ್ನಾಲ್ಕು ಮಂದಿ ಗಾಯಗೊಂಡಿದ್ದಾರೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎರಡು ಸಮುದಾಯಗಳ ನಡುವೆ ಸಂಧಾನ ಮಾಡಿದ ಹಿನ್ನೆಲೆ ಎರಡೂ ಸಮುದಾಯದ ಕಡೆಯವರು ಯಾವುದೇ ದೂರು ದಾಖಲಿಸಿಲ್ಲ ಎಂದು ವರದಿಯಾಗಿದೆ.