ಮನೆ ಶಿಕ್ಷಣ ಪಿಯುಸಿ ಮರುಮೌಲ್ಯಮಾಪನದ ಬಳಿಕ ವಿಶೇಷ ಚೇತನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

ಪಿಯುಸಿ ಮರುಮೌಲ್ಯಮಾಪನದ ಬಳಿಕ ವಿಶೇಷ ಚೇತನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

0

ಬೆಂಗಳೂರು:  ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬಳಿಕ ತನಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲವೆಂದು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದ ವಿಶೇಷ ಚೇತನ ವಿದ್ಯಾರ್ಥಿ ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನ  ಗಳಿಸಿದ್ದಾನೆ.

Join Our Whatsapp Group

ಮರು ಮೌಲ್ಯ ಮಾಪನದಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶ್​​ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.

ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್ ​ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶ್​ ನಾಯ್ಕ್​ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.74.64ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ 61.22%, ವಿಜ್ಞಾನ ವಿಭಾಗದಲ್ಲಿ 85.71%, ವಾಣಿಜ್ಯ ವಿಭಾಗದಲ್ಲಿ 75.89% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹಿಂದಿನ ಲೇಖನಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು ದೇಹಗಳ ಸುಟ್ಟು ಹಾಕಿದ ಮಗ
ಮುಂದಿನ ಲೇಖನಎಫ್ ಸಿಆರ್ ಎ ನೋಂದಣಿ ರದ್ದತಿ ವಿರುದ್ಧ ರಾಜೀವ್ ಗಾಂಧಿ ಪ್ರತಿಷ್ಠಾನ ಅರ್ಜಿ: ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ನೋಟಿಸ್