ಮನೆ ರಾಜಕೀಯ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ: ಜಗದೀಶ ಶೆಟ್ಟರ್

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ: ಜಗದೀಶ ಶೆಟ್ಟರ್

0

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ‌ ಹೆಚ್ಚಿನ ಸ್ಥಾನಗಳನ್ನು‌ ಗೆಲ್ಲುವ ಗುರಿ‌ ಇಟ್ಟುಕೊಳ್ಳಲಾಗಿದೆ. ಪಕ್ಷವು‌‌ ನನ್ನ ಅನುಭವ ಬಳಸಿಕೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.

Join Our Whatsapp Group

ಶನಿವಾರ ತಮ್ಮ‌ ನಿವಾಸದಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ‌ ರಾಜ್ಯದ ಎಲ್ಲ‌ ಕಡೆ ಪ್ರವಾಸ ಮಾಡುತ್ತೇನೆ. ಉತ್ತರ ಕರ್ನಾಟಕ ಭಾಗದ 11 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ‌ ಗೆಲ್ಲಲು ಶ್ರಮಿಸುತ್ತೇನೆ ಎಂದರು.

ವಿಧಾನ ಪರಿಷತ್ ಸದಸ್ಯನಾಗಿರುವುದು ನನ್ನ ರಾಜಕೀಯ ಜೀವನದಲ್ಲಿ‌ ಹೊಸ ಅಧ್ಯಾಯ. ಈ ಎರಡನೇ ಇನಿಂಗ್ಸ್ ನಲ್ಲಿ ಉತ್ತಮ‌ ಫಲಿತಾಂಶ ಸಿಗುವ ವಿಶ್ವಾಸ  ಇದೆ‌ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನನಗೆ ಹೆಚ್ಚಿನ‌ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಈಗ ವಿಧಾನ ಪರಿಷತ್ ಸಭಾಪತಿ ಸೇರಿದಂತೆ ಯಾವುದೇ ಹುದ್ದೆ ನೀಡುವ ಪ್ರಸ್ತಾವ ಮಾಡಿಲ್ಲ. ಯಾವ ಹುದ್ದೆ ನೀಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

ಈ ಭಾಗದ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುತ್ತೇನೆ.   ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ಶ್ರಮಿಸುತ್ತೇನೆ ಎಂದು‌ ಹೇಳಿದರು.

ವಿಧಾನ ಪರಿಷತ್ ಸದಸ್ಯನಾಗಿ ಸೇವೆ ಮಾಡಲು‌ ಕಾಂಗ್ರೆಸ್ ಪಕ್ಷ ಅವಕಾಶ ಕಲ್ಪಿಸಿದೆ. ಇದಕ್ಕೆ ಪಕ್ಷದ ಕೇಂದ್ರದ ನಾಯಕರು, ಮುಖ್ಯಮಂತ್ರಿ ಮತ್ತು ಎಲ್ಲ ಶಾಸಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಸೋತಿರುವ ಬಿಜೆಪಿ ನಾಯಕರನ್ನು‌ ಸೆಳೆಯುವ ಕೆಲಸವನ್ನು ನಾವು‌ ಮಾಡುತ್ತಿಲ್ಲ. ಅಲ್ಲಿ ಸಾಕಷ್ಟು ಅಸಮಾಧಾನ, ಬಿರುಕು ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಗೊತ್ತಿಲ್ಲ ಎಂದು ಹೇಳಿದರು.

ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಬೇಕಾದ ವಿಷಯವನ್ನು ಸಂಸದ ಪ್ರತಾಪಸಿಂಹ ಅವರು ಬಹಿರಂಗವಾಗಿ ಹೇಳಿದ್ದಾರೆ.  ಒಳ ಒಪ್ಪಂದ ಮಾಡಿಕೊಂಡಿರುವ ತಮ್ಮ‌ ನಾಯಕರ ಹೆಸರನ್ನು ಅವರು ಬಹಿರಂಗ ಪಡಿಸಬೇಕು. ಇದು ಜನರಿಗೆ ಗೊತ್ತಾಗಬೇಕು. ಇಲ್ಲದಿದ್ದರೆ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುತ್ತಾರೆ ಎಂದರು.

ಹಿಂದಿನ ಲೇಖನಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಮುಂದಿನ ಲೇಖನರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ