ಮನೆ ಅಂತಾರಾಷ್ಟ್ರೀಯ ಪಾಕ್‌ ಒಳಗಡೆಯೇ ಏರ್‌ಸ್ಟ್ರೈಕ್‌ – ಬಾಂಬ್‌ಗೆ 30 ಮಂದಿ ಬಲಿ

ಪಾಕ್‌ ಒಳಗಡೆಯೇ ಏರ್‌ಸ್ಟ್ರೈಕ್‌ – ಬಾಂಬ್‌ಗೆ 30 ಮಂದಿ ಬಲಿ

0

ಇಸ್ಲಾಮಾಬಾದ್‌ : ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ.

ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು ಎಂಟು LS-6 ಬಾಂಬ್‌ಗಳನ್ನು ಹಾಕಿವೆ. ಇಂದು (ಸೋಮವಾರ) ಈ ದಾಳಿ ನಡೆದಿದ್ದು ಭಾರೀ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದೆ ಎಂದು ವರದಿಯಾಗಿದೆ.

ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಶವಗಳನ್ನು ಹುಡುಕುವಲ್ಲಿ ನಿರತವಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ಚೀರಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಖೈಬರ್ ಪಖ್ತುಂಖ್ವಾದಲ್ಲಿ ಹಿಂದೆ ಅನೇಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಪಾಕಿಸ್ತಾನದಲ್ಲಿ ಭಯೋತ್ಪಾದ ದಾಳಿ ಹೆಚ್ಚಾಗುತ್ತಿದೆ. ಹಿಂದಿನ ತಿಂಗಳಿಗೆ ಹೋಲಿಸಿದರೆ ಶೇ.42 ರಷ್ಟು ಹೆಚ್ಚಳ ಕಂಡಿದೆ.

ಈ ವರ್ಷದ ದೇಶಾದ್ಯಂತ ಕನಿಷ್ಠ 74 ಭಯೋತ್ಪಾದಕ ದಾಳಿಗಳು ದಾಖಲಾಗಿದ್ದು, 90 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಖೈಬರ್ ಪಖ್ತುಂಖ್ವಾದ ಪ್ರಾಂತ್ಯದಲ್ಲಿ ಹೆಚ್ಚು ದಾಳಿ ನಡೆದರೆ ನಂತರದ ಸ್ಥಾನದಲ್ಲಿ ಬಲೂಚಿಸ್ತಾನ್ ಇದೆ.