ಮನೆ ಕಾನೂನು ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಪ್ರಕರಣ: ಡಿ.ಕೆ.ಸುರೇಶ್‌ಗೆ ಇ.ಡಿ ಸಮನ್ಸ್‌

ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಪ್ರಕರಣ: ಡಿ.ಕೆ.ಸುರೇಶ್‌ಗೆ ಇ.ಡಿ ಸಮನ್ಸ್‌

0

ಬೆಂಗಳೂರು: ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ  ಸಂಬಂಧಿಸಿದಂತೆ, ಕಾಂಗ್ರೆಸ್‌ ಮುಖಂಡ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಸುರೇಶ್‌ ಅವರ ಮನೆಗೆ ತೆರಳಿದ್ದ ಇ.ಡಿ ಅಧಿಕಾರಿಗಳು ಸಮನ್ಸ್‌ ಜಾರಿ ಮಾಡಿ ಜೂನ್ 19 ರಂದು  ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ಸಮನ್ಸ್‌  ಸ್ವೀಕರಿಸಿದ ಸುರೇಶ್ ತಿಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಾ ಗೌಡ  ಚಿನ್ನಾಭರಣ ಉದ್ಯಮಿಗಳಿಗೆ ಕೋಟ್ಯಂತರ ರೂ. ಚಿನ್ನ ಪಡೆದುಕೊಂಡು ವಂಚಿಸಿದ್ದರು. ನಂತರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಇದಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಇತ್ತೀಚೆಗೆ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರ ಬೆಂಗಳೂರು ನಿವಾಸದಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದರು.