ಮನೆ ರಾಜ್ಯ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ ಅಮಾನತು

ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ ಅಮಾನತು

0

ರಾಮನಗರ: 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ.

ಇದರ ಬೆನ್ನಲ್ಲೇ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ ರನ್ನ ಅಮಾನತು ಮಾಡಲಾಗಿದೆ.

ರಾಮನಗರದ 40 ವಕೀಲರ ವಿರುದ್ಧ ಐಜೂರು ಪೊಲೀಸ್ ಠಾಣೆ ಪಿಎಸ್​ಐ ಆಗಿದ್ದ ತನ್ವೀರ್ ಹುಸೇನ್​ ಅವರು ಎಫ್ ​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರ (ಫೆ.19) ಪ್ರತಿಭಟನೆ ಆರಂಭಿಸಿದರು.

ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡಿತ್ತು. ಧರಣಿನಿರತ ವಕೀಲರಿಗೆ ಪ್ರತಿಪಕ್ಷ ನಾಯಕ ಆರ್ ಅಶೋಕ, ಜೆಡಿಎಸ್ ನಾಯಕ ಹೆಚ್ ​ಡಿ ಕುಮಾರಸ್ವಾಮಿ ಅವರು ಕೂಡ ಸಾಥ್ ನೀಡಿದ್ದರು. ತಡ ರಾತ್ರಿ ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಬಂದು ದರಣಿ ನಡೆಸುತ್ತಿದ್ದ ವಕೀಲರಿಗೆ ಕೈ ಜೋಡಿಸಿದ್ದರು. ಇದಾದ ಬಳಿಕ ಈ ವಿಚಾರ ದೊಡ್ಡ ಮಟ್ಟಿಗೆ ಚರ್ಚೆ ಆಗಲು ಆರಂಭವಾಯಿತು. ಈ ವಿಚಾರ ಸಂಬಂಧ ಜೆಡಿಎಸ್, ಬಿಜೆಪಿ ಸದಸ್ಯರು ಸರ್ಕಾರದ ಉತ್ತರಕ್ಕಾಗಿ ಒತ್ತಾಯಿಸಿದ್ದು, ಇಂದು ವಿಧಾನಸಭೆಯಲ್ಲಿ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಲಿದ್ದಾರೆ.

ಮತ್ತೊಂದೆಡೆ ಫೆ.19ರಂದು ಶುರುವಾದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ತಡರಾತ್ರಿ ಕೂಡ ಧರಣಿ ನಡೆದಿದೆ. ಪಿಎಸ್‌ ಐ ಅಮಾನತಿಗೆ ಆಗ್ರಹಿಸಿ ವಕೀಲರು ತಡರಾತ್ರಿ ವರೆಗೂ ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಈಗ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ ರನ್ನ ಅಮಾನತು ಮಾಡಲಾಗಿದೆ.