ಮನೆ ಮನರಂಜನೆ ಮೊದಲ ಮಗುವಿನ ನಿರೀಕ್ಷೆಯಲ್ಲಿ ಆಲಿಯಾ ಭಟ್- ರಣಬೀರ್ ಕಪೂರ್ ಜೋಡಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಆಲಿಯಾ ಭಟ್- ರಣಬೀರ್ ಕಪೂರ್ ಜೋಡಿ

0

ಮುಂಬೈ(Mumbai): ಕಳೆದ ಏಪ್ರಿಲ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್‌ನ ತಾರಾ ಜೋಡಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವ ಚಿತ್ರವನ್ನು ಸೋಮವಾರ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಆಲಿಯಾ ಭಟ್, ‘ನಮ್ಮ ಮಗು ಸದ್ಯದಲ್ಲೇ ಬರಲಿದೆ’ ಎಂದು ಶೀರ್ಷಿಕೆ ನೀಡಿದ್ದಾರೆ.

ಸುಮಾರು ಐದು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದ ಈ ಜೋಡಿ ಏಪ್ರಿಲ್‌ 14, 2022ರಂದು ವಿವಾಹವಾಗಿತ್ತು.ಇತ್ತೀಚೆಗೆ ತೆರೆಕಂಡ ‘ಆರ್‌ಆರ್‌ಆರ್‌’ ಸಿನಿಮಾದಲ್ಲಿ ಆಲಿಯಾ ಗಮನ ಸೆಳೆದಿದ್ದರು.

ಸೆಪ್ಟೆಂಬರ್ 9ರಂದು ತೆರೆ ಕಾಣಲು ಸಿದ್ಧವಾಗಿರುವ ಬಹು ನಿರೀಕ್ಷಿತ ಅಯಾನ್ ಮುಖರ್ಜಿ ಅವರ ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಅಲಿಯಾ ಭಟ್ ಮತ್ತು ರಣಬೀರ್ ಕಪೂರ್ ತೆರೆ ಹಂಚಿಕೊಂಡಿದ್ದಾರೆ.