ಮನೆ ರಾಜಕೀಯ ಉಕ್ಕು ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ

ಉಕ್ಕು ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ

0

ಶಿವಮೊಗ್ಗ: ವಿಶ್ವೇಶ್ವರಯ್ಯ  ಉಕ್ಕು ಮತ್ತು ಕಬ್ಬಿಣ  ಕಾರ್ಖಾನೆಯನ್ನು ಉಳಿಸಲು ಎಲ್ಲ  ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ  ಎಲ್ಲರ ಸಹಕಾರ ಅಗತ್ಯವಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿ ಮಾಡಿದ  ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದರು.

ವಿ ಐ ಎಸ್ ಎಲ್ ಅತ್ಯಂತ ಮಹತ್ವದ ಕಾರ್ಖಾನೆ.  ಜಾಗತೀಕರಣದ ಪರಿಣಾಮ ಅನೇಕ ಸಾರ್ವಜನಿಕ ಸಂಸ್ಥೆಗಳು ಮುಚ್ಚಿವೆ . ವಿ ಐ ಎಸ್ ಎಲ್ ಕಾರ್ಖಾನೆಯು  ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನದಿಂದ ಉಳಿದುಕೊಂಡು ಬಂದಿದೆ ಎಂದರು.

ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ

ಕೇಂದ್ರ ಸರ್ಕಾರ ಡಿಸ್’ಇನ್ವೆಸ್ಟ್ ಮೆಂಟ್ ಯೊಜನೆ ಅಡಿಯಲ್ಲಿ ಈ ಕಾರ್ಖಾನೆ ಮುಚ್ಚಲು ಪ್ರಕ್ರಿಯೆ ಆರಂಭಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ.  ನಮ್ಮ ರಾಜ್ಯದ ಕಬ್ಬಿಣದ ಅದಿರಿಗೆ ಸಾಕಷ್ಟು ಬೆಲೆ‌ ಇದೆ. ಜಿಂದಾಲ್ ಸಂಸ್ಥೆ ಅಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿರಬೇಕಾದರೆ, ಈ ಸಂಸ್ಥೆ ಉಳಿಸಲು ನಾವು ಪ್ರಯತ್ನ ಮಾಡುತ್ತೇವೆ. ಮೊದಲು ಕ್ಲೋಸರ್ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುವುದು. ಬೇರೆ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಹಿಂದಿನ ಲೇಖನಬಾಡಿಗೆ ತಾಯ್ತನ ಕಾಯಿದೆಯಡಿ ಬಾಡಿಗೆ ತಾಯಂದಿರು ಸ್ವಂತ ಸಂತಾನೋತ್ಪತ್ತಿ ಕೋಶಗಳನ್ನು ನೀಡುವಂತಿಲ್ಲ: ಸುಪ್ರೀಂಗೆ ಕೇಂದ್ರ
ಮುಂದಿನ ಲೇಖನಸಂಬಂಧಿಕ ವ್ಯಕ್ತಿಯ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ