ಮುರುಡೇಶ್ವರ: ಚುನಾವಣೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾಗಲಿದ್ದು, ಚನ್ನಪಟ್ಟಣ ಸೇರಿ ಮೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಆತ್ಮವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಮತ ಪಡೆದಿತ್ತು. ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆಯುವ ವಿಶ್ವಾಸವಿದೆ ಎಂದು ಇಲ್ಲಿ ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿ ಮತ್ತು ದೇವೆಗೌಡರ ಕುಟುಂಬದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಅವರಿಗೆ ಈಗಾಗಲೆ ಬುದ್ಧಿ ಹೇಳಿದ್ದೇನೆ. ಜಮೀರ್ ಉತ್ತಮ ಕೆಲಸಗಾರ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮುರ್ಡೇಶ್ವರದ ನೇತ್ರಾಣಿ ದ್ವೀಪದ ಬಳಿ ಸ್ಕೂಬಾ ಡೈವಿಂಗ್ ಮಾಡಿ ಇಲ್ಲಿನ ಪ್ರಕೃತಿ ಸೌಂದರ್ಯ ಆಸ್ವಾದಿಸಿದೆ. ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶ ಇರುವುದನ್ನು ಖುದ್ದಾಗಿ ಅವಲೋಕಿಸಲು ಸ್ಕೂಬಾ ಡೈವಿಂಗ್ ಚಟುವಟಿಕೆ ಅವಕಾಶ ಒದಗಿಸಿತು ಎಂದರು.