ಮನೆ ಅಂತಾರಾಷ್ಟ್ರೀಯ ಚೀನಾದಲ್ಲಿ ಕಿಮ್ ಸ್ಪರ್ಶಿಸಿದ ಜಾಗವೆಲ್ಲ ಕ್ಲೀನ್‌ – ಚರ್ಚೆಗೆ ಗ್ರಾಸವಾದ ನಡೆ..!

ಚೀನಾದಲ್ಲಿ ಕಿಮ್ ಸ್ಪರ್ಶಿಸಿದ ಜಾಗವೆಲ್ಲ ಕ್ಲೀನ್‌ – ಚರ್ಚೆಗೆ ಗ್ರಾಸವಾದ ನಡೆ..!

0

ಬೀಜಿಂಗ್‌ : ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್ ಮತ್ತು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಭೇಟಿ ಬಳಿಕ ಒಂದು ಅಸಹಜ ಬೆಳವಣಿಗೆಯೊಂದು ನಡೆದಿದೆ.

ಬೀಜಿಂಗ್‌ನಲ್ಲಿ ಪುಟಿನ್ ಜೊತೆಗಿನ ದ್ವಿಪಕ್ಷೀಯ ಸಭೆಯ ಬಳಿಕ ಕಿಮ್ ಜಾಂಗ್-ಉನ್ ಅವರ ಭದ್ರತಾ ತಂಡ ಇಡೀ ಪ್ರದೇಶವನ್ನು ಸ್ವಚ್ಛಗೊಳಿಸಿದೆ. ಕಿಮ್ ಕುಡಿದ ಟೀ ಕಪ್, ಕುಳಿತ ಕುರ್ಚಿ, ಸ್ಪರ್ಶಿಸಿದ ಎಲ್ಲಾ ವಸ್ತುಗಳನ್ನು ಸ್ವಚ್ಛಗೊಳಿಸಿದೆ. ಯಾವ ಕಾರಣಕ್ಕೆ ಸಚ್ಛಗೊಳಿಸಲಾಗಿದೆ ಎನ್ನುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

https://twitter.com/runews/status/1963149343759683951

ಡಿಎನ್‌ಎ ಸಂಗ್ರಹಣೆಯನ್ನು ತಡೆಗಟ್ಟಲು ಮತ್ತು ಭದ್ರತೆಯನ್ನು ಖಚಿತಪಡಿಸಲು ಸ್ವಚ್ಛಗೊಳಿಸಿರಬಹುದು ಎನ್ನಲಾಗುತ್ತಿದೆ. ಈ ಮೂಲಕ ಮೂಲಕ ಗೂಢಾಚಾರಿ ಚಟುವಟಿಕೆಗಳನ್ನು ತಡೆಗಟ್ಟಲು ಸಾಧ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಂಡಿರುವ ಸಾಧ್ಯತೆಯಿದೆ. ಈ ಘಟನೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.